ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಅಬಕಾರಿ ನೀತಿ ‌ಹಗರಣ: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾ

ಮುಂದಿನ 3 ತಿಂಗಳಲ್ಲಿ ಕಾನೂನು ಪ್ರಕ್ರಿಯೆ ಮಂದಗತಿಯಲ್ಲಿ ಸಾಗಿದರೆ, ಸಿಸೋಡಿಯಾ ಜಾಮೀನಿಗೆ ಮರು ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
Published 30 ಅಕ್ಟೋಬರ್ 2023, 7:33 IST
Last Updated 30 ಅಕ್ಟೋಬರ್ 2023, 7:33 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಮತ್ತೊಮ್ಮೆ ಹಿನ್ನೆಡೆಯಾಗಿದೆ. ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ಎರಡೂ ಅರ್ಜಿಗಳ ತೀರ್ಪನ್ನು ಅ.17 ರಂದು ಕಾಯ್ದಿರಿಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌.ವಿ.ಎನ್ ಭಟ್ಟಿ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಅಲ್ಲದೇ ಮುಂದಿನ 6-8 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸುವಂತೆ ತನಿಖಾ ಸಂಸ್ಥೆಗಳಿಗೆ ಸೂಚಿಸಿದೆ. ಈ ಮಧ್ಯೆ ವಿಚಾರಣೆ ಪೂರ್ಣಗೊಳ್ಳದಿದ್ದರೆ, ಸಿಸೋಡಿಯಾ ಜಾಮೀನಿಗೆ ಮರು ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ದೆಹಲಿ ಸರ್ಕಾರದ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಫೆ.26ರಂದು ಸಿಬಿಐ ಬಂಧಿಸಿತ್ತು. ತಿಹಾರ್ ಜೈಲಿನಲ್ಲಿ ವಿಚಾರಣೆ ನಡೆಸಿದ ನಂತರ ಮಾರ್ಚ್ 9ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಅವರನ್ನು ಬಂಧಿಸಿತ್ತು. ಫೆ.28ರಂದು ಸಿಸೋಡಿಯಾ ದೆಹಲಿ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು.

‘ಮೇ 30ರಂದು ಸಿಬಿಐ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಅವರಿಗೆ ಜಾಮೀನು ನಿರಾಕರಿಸಿತ್ತು. ಉಪಮುಖ್ಯಮಂತ್ರಿ ಮತ್ತು ಅಬಕಾರಿ ಸಚಿವರಾಗಿದ್ದ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಮರ್ಥ್ಯವನ್ನು ಹೊಂದಿರುವ ಉನ್ನತ ವ್ಯಕ್ತಿ ಎಂದು ಹೇಳಿತ್ತು. ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಜುಲೈ 3 ರಂದು ಹೈಕೋರ್ಟ್ ಅವರಿಗೆ ಜಾಮೀನು ನಿರಾಕರಿಸಿತು. ಅವರ ವಿರುದ್ಧದ ಆರೋಪಗಳು ಗಂಭೀರವಾಗಿದೆ‘ ಎಂದು ಹೇಳಿತು.

ದೆಹಲಿ ಸರ್ಕಾರ 2021ರ ನ.17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ‌‌‌‌‌‌‌ಭ್ರಷ್ಟಾಚಾರದ ಆರೋಪಗಳ ನಡುವೆ 2022ರ ಸೆಷ್ಟೆಂಬರ್‌ ತಿಂಗಳ ಕೊನೆಯಲ್ಲಿ ಅದನ್ನು ರದ್ದುಗೊಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT