ನವದೆಹಲಿ: ದೆಹಲಿ ಅಬಕಾರಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಬೇರೊಂದು ಪೀಠಕ್ಕೆ ವರ್ಗಾಯಿಸಿರುವುದಾಗಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಗುರುವಾರ ಹೇಳಿದ್ದಾರೆ.

ವಿಚಾರಣೆಯಿಂದ ಹಿಂದೆ ಸರಿಯಬೇಕು ಎಂದು ಕೋರಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹಾಗೂ ಇತರರು ಸಲ್ಲಿಸಿದ್ದ ಅರ್ಜಿಯನ್ನು ಈ ಹಿಂದೆ ನ್ಯಾ.ಶರ್ಮಾ ನಿರಾಕರಿಸಿ, ವಿಚಾರಣೆಯಿಂದ ಹಿಂದೆ ಸರಿಯುವುದಿಲ್ಲ ಎಂದಿದ್ದರು. ಇದೀಗ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಎಎಪಿಯ ಹಲವು ನಾಯಕರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಲು ನ್ಯಾ.ಶರ್ಮಾ ಮುಂದಾಗಿರುವ ಕಾರಣ ಅಬಕಾರಿ ಪ್ರಕರಣದ ವಿಚಾರಣೆಯನ್ನು ಬೇರೊಂದು ಪೀಠಕ್ಕೆ ವರ್ಗಾಯಿಸುತ್ತಿರುವುದಾಗಿ ತಿಳಿಸಿದ್ದಾರೆ.

ಈ ಕುರಿತಂತೆ ನ್ಯಾ. ಶರ್ಮಾ ಸ್ಪಷ್ಟನೆ ನೀಡಿದ್ದು, ‘ನಾನು ವಿಚಾರಣೆಯಿಂದ ಹಿಂದೆ ಸರಿಯುತ್ತಿಲ್ಲ ಪ್ರಕರಣವನ್ನು ಬೇರೊಂದು ಪೀಠಕ್ಕೆ ವರ್ಗಾಯಿಸುತ್ತಿದ್ದೇನೆ ಅಷ್ಟೇ. ಇದು ನ್ಯಾಯಾಂಗದ ಶಿಸ್ತು’ ಎಂದೂ ಹೇಳಿದ್ದಾರೆ.

ನ್ಯಾಯಾಂಗ ನಿಂದನೆ ಕ್ರಮ: ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ದುರ್ಗೇಶ್ ಪಾಠಕ್, ಸಂಜಯ್ ಸಿಂಗ್, ಸೌರಭ್ ಭಾರದ್ವಾಜ್ ಹಾಗೂ ಎಎಪಿಯ ಇತರ ಕೆಲವು ನಾಯಕರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಲು ನ್ಯಾ.ಶರ್ಮಾ ಗುರುವಾರ ಮುಂದಾಗಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವ ಅವರು, ‘ಅಬಕಾರಿ ಪ್ರಕರಣದ ವಿಚಾರಣೆಯಿಂದ ನಾನು ಹಿಂದೆ ಸರಿಯುವುದಿಲ್ಲ ಎಂದು ಹೇಳಿದ ಬಳಿಕ ಕಾನೂನಾತ್ಮಕವಾಗಿ ಪರಿಹಾರ ಪಡೆಯುವ ಬದಲು ಕೇಜ್ರಿವಾಲ್ ನನ್ನ ಗೌರವಕ್ಕೆ ಚ್ಯುತಿ ತರುವ ಕೆಲಸಕ್ಕೆ ಕೈ ಹಾಕಿದ್ದಾರೆ. ಮಾನಹಾನಿಕರ ಪೋಸ್ಟ್ಗಳನ್ನು ಹಾಕುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳುತ್ತೇನೆ’ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-51-324223337

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.