ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಆರ್‌ಎಸ್‌ ನಾಯಕಿ ಕವಿತಾ ಕಸ್ಟಡಿ ಅವಧಿ ವಿಸ್ತರಣೆ

Published 9 ಏಪ್ರಿಲ್ 2024, 7:50 IST
Last Updated 9 ಏಪ್ರಿಲ್ 2024, 7:50 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರ ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿ ಅವಧಿಯನ್ನು ನ್ಯಾಯಾಲಯವು ಏಪ್ರಿಲ್ 23ರವರೆಗೆ ವಿಸ್ತರಿಸಿದೆ.

ದೆಹಲಿ ರೋಸ್ ಅವೆನ್ಯೂ ನ್ಯಾಯಾಲಯ ಇಂದು (ಮಂಗಳವಾರ) ಆದೇಶಿಸಿದೆ. ಈ ಕುರಿತು ಸುದ್ದಿ ಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ.

ನ್ಯಾಯಾಲಕ್ಕೆ ಹಾಜರುಪಡಿಸಲು ಹೋಗುವ ವೇಳೆ ಈ ಕುರಿತು ಪ್ರತಿಕ್ರಿಯಿಸಿದ ಕವಿತಾ,'ಇದೊಂದು ರಾಜಕೀಯ ಪ್ರೇರಿತ ಪ್ರಕರಣ. ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಲಾಗುತ್ತಿದೆ. ಸಿಬಿಐ ಈಗಾಗಲೇ ನನ್ನ ಹೇಳಿಕೆಯನ್ನು ದಾಖಲಿಸಿಕೊಂಡಿದೆ' ಎಂದು ಹೇಳಿದ್ದಾರೆ.

ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್ ಪುತ್ರಿ ಕವಿತಾ ಅವರು, ಅಬಕಾರಿ ನೀತಿ ಹಗರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾಗಿದ್ದಾರೆ. ಅಬಕಾರಿ ನೀತಿಯ ಅನುಕೂಲ ಪಡೆದುಕೊಳ್ಳಲು ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ ₹100 ಕೋಟಿ ನೀಡಿದ್ದಾರೆ ಎಂದು ಇ.ಡಿ ಆರೋಪಿಸಿದೆ.

ಕವಿತಾ ಅವರನ್ನು 2024, ಮಾರ್ಚ್‌ 15ರಂದು ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT