ನವದೆಹಲಿ: ದೆಹಲಿ ಅಬಕಾರಿ ನೀತಿಯ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಇಂದು (ಮಂಗಳವಾರ) ದೆಹಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದೆ.

ನ್ಯಾಯಾಲಯಕ್ಕೆ ಪ್ರವೇಶಿಸುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿ ಬಿಆರ್‌ಎಸ್ ನಾಯಕಿ, ‘ಇದು ಕಾನೂನುಬಾಹಿರ ಪ್ರಕರಣವಾಗಿದೆ. ನಾವು ಇದರ ವಿರುದ್ಧ ಹೋರಾಡುತ್ತೇವೆ. ಜೈ ತೆಲಂಗಾಣ’ ಎಂದು ಹೇಳಿದ್ದಾರೆ.

ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ, 46 ವರ್ಷದ ಕವಿತಾ ಅವರನ್ನು ಇ.ಡಿ ಅಧಿಕಾರಿಗಳು ಮಾರ್ಚ್ 15ರಂದು ಹೈದರಾಬಾದ್‌ನ ಅವರ ನಿವಾಸದಲ್ಲಿಯೇ ಬಂಧಿಸಿತ್ತು. ಕವಿತಾ ಅವರನ್ನು ಮಾರ್ಚ್ 23ರವರೆಗೆ ಇ.ಡಿ ವಶಕ್ಕೆ ಒಪ್ಪಿಸಲಾಗಿತ್ತು.

ಕೆ.ಕವಿತಾ ಅವರ ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿ ಅವಧಿಯನ್ನು ಮಾರ್ಚ್ 26ರವರೆಗೆ ವಿಸ್ತರಿಸಿ ದೆಹಲಿ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಜಾರಿ ನಿರ್ದೇಶನಾಲಯಕ್ಕೆ ಮಾರ್ಚ್ 23ರಂದು (ಶನಿವಾರ) ಅನುಮತಿ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.