ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಅಬಕಾರಿ ನೀತಿ ಹಗರಣ: ಸಿಬಿಐ ಅಧಿಕಾರಿಗಳಿಂದ ಕವಿತಾ ವಿಚಾರಣೆ

Last Updated 11 ಡಿಸೆಂಬರ್ 2022, 6:00 IST
ಅಕ್ಷರ ಗಾತ್ರ

ಹೈದರಾಬಾದ್: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಹಾಗೂ ಬಿಆರ್‌ಎಸ್‌ನ ವಿಧಾನ ಪರಿಷತ್‌ಸದಸ್ಯೆ ಕೆ.ಕವಿತಾ ಅವರನ್ನು ಸಿಬಿಐ ಅಧಿಕಾರಿಗಳು ಭಾನುವಾರ ವಿಚಾರಣೆಗೆ ಒಳಪಡಿಸಿದ್ದಾರೆ.

ಬಂಜಾರ ಹಿಲ್ಸ್‌ನಲ್ಲಿರುವ ಕವಿತಾ ಅವರ ನಿವಾಸಕ್ಕೆ ಬೆಳಗ್ಗೆ 10 ಗಂಟೆ ಸುಮಾರಿಗೆ ಆಗಮಿಸಿದ ಸಿಬಿಐ ಅಧಿಕಾರಿಗಳು ಕವಿತಾ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕವಿತಾ ಅವರ ನಿವಾಸದ ಒಳಗಡೆ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದರೆ, ಅವರ ನಿವಾಸದ ಸುತ್ತ ನೂರಾರು ಸಂಖ್ಯೆಯಲ್ಲಿ ಅವರ ಬೆಂಬಲಿಗರು ಸೇರಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಹಣಕಾಸು ವ್ಯವಹಾರ ನಡೆಸಲಾಗಿದೆಯೇ ಎಂದು ಅವರನ್ನು ಪ್ರಶ್ನೆ ಮಾಡಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಿಬಿಐ ವಿಚಾರಣೆಗೂ ಒಂದು ದಿನ ಮುಂಚಿತವಾಗಿಕವಿತಾ ಅವರ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ಕವಿತಾ ಅವರ ನಿವಾಸದ ಬಳಿ ಕೆಲವು ಭಿತ್ತಿಪತ್ರ ಹಾಗೂ ಫೋಟೊ ಪ್ರದರ್ಶಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.

‘ಹೋರಾಟಗಾರರ ಮಗಳು ಎಂದೂ ಭಯ ಪಡುವುದಿಲ್ಲ‘’ನಿಮ್ಮ ಜೊತೆ ನಾವಿದ್ದೇವೆ ಕವಿತಕ್ಕ‘ ಎಂಬ ಭಿತ್ತಿಪತ್ರಗಳನ್ನು ಪ್ರದರ್ಶಿಸಿದ್ದಾರೆ. ವಿಚಾರಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT