ನವದೆಹಲಿ: ದೆಹಲಿ ಅಬಕಾರಿ ನೀತಿಯಲ್ಲಿನ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ಆಪ್ ಸಂಸದ ಸಂಜಯ್ ಸಿಂಗ್ ಅವರು ಫೆಬ್ರುವರಿ 4ರಿಂದ 10ರ ವರೆಗೆ ಸಂಸತ್ ಅಧಿವೇಶನದಲ್ಲಿ ಭಾಗಿಯಾಗಲು ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಬಗ್ಗೆ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶರಾದ ಎಂ.ಕೆ ನಾಗ್ಪಾಲ್ ಅವರು, ಫೆಬ್ರುವರಿ 3ರೊಳಗಾಗಿ ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಜಾರಿ ನಿರ್ದೇಶನಾಲಯಕ್ಕೆ ಸೂಚನೆ ನೀಡಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಸಂಜಯ್ಸಿಂಗ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಆರೋಪಿಸಿ ಇ.ಡಿಯು 2023ರ ಅಕ್ಟೋಬರ್ನಲ್ಲಿ ಸಂಜಯ್ಸಿಂಗ್ ಅವರನ್ನು ಬಂಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.