ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಬಕಾರಿ ನೀತಿ ಹಗರಣ: ಸಿಸೋಡಿಯಾ, ಸಂಜಯ್‌ ಸಿಂಗ್‌ ನ್ಯಾಯಾಂಗ ಬಂಧನ ವಿಸ್ತರಣೆ

Published 20 ಜನವರಿ 2024, 14:25 IST
Last Updated 20 ಜನವರಿ 2024, 14:25 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಜೊತೆ ನಂಟು ಹೊಂದಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಎಎಪಿ ಮುಖಂಡರಾದ ಸಂಜಯ್‌ ಸಿಂಗ್‌ ಮತ್ತು ಮನೀಶ್‌ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಇಲ್ಲಿನ ನ್ಯಾಯಾಲಯವು ಫೆಬ್ರುವರಿ 3ರ ವರೆಗೆ ವಿಸ್ತರಿಸಿದೆ.

ಸಿಂಗ್‌ ಮತ್ತು ಸಿಸೋಡಿಯಾ ಅವರು ತಿಹಾರ್‌ ಜೈಲಿನಿಂದ ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಭದ್ರತೆಯ ಕಾರಣಕ್ಕೆ ಆರೋಪಿಗಳನ್ನು ನ್ಯಾಯಾಲಯಕ್ಕೆ ನೇರವಾಗಿ ಹಾಜರುಪಡಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಂಗ್‌ ಅವರ ಆಪ್ತ ಹಾಗೂ ಪ್ರಕರಣದಲ್ಲಿ ಆರೋಪಿಯಾಗಿರುವ ಸರ್ವೇಶ್‌ ಮಿಶ್ರಾ ಅವರ ಜಾಮೀನು ಅರ್ಜಿ ಕುರಿತ ಆದೇಶವನ್ನು ವಿಶೇಷ ನ್ಯಾಯಾಧೀಶರಾದ ಎಂ.ಕೆ. ನಾಗ್ಪಾಲ್‌ ಅವರು ಇದೇ 24ಕ್ಕೆ ಕಾಯ್ದಿರಿಸಿದ್ದಾರೆ.

ಮಿಶ್ರಾ ಅವರ ಜಾಮೀನು ಅರ್ಜಿಗೆ ಜಾರಿ ನಿರ್ದೇಶನಾಲಯವು ವಿರೋಧ ವ್ಯಕ್ತಪಡಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT