ನವದೆಹಲಿ: ದೇಶದ ಗಮನ ಸೆಳೆದಿರುವ ದೆಹಲಿ ವಿಧಾನಸಭೆ ಚುನಾವಣೆಯ ಮತದಾನ ಬುಧವಾರ ಮುಕ್ತಾಯಗೊಂಡಿದ್ದು, ಈ ಬಾರಿ ಬಿಜೆಪಿ ಸರಳ ಬಹುಮತದ ಗಡಿ ದಾಟಿ ಅಧಿಕಾರಕ್ಕೇರಲಿದ್ದರೆ, ಆಡಳಿತಾರೂಢ ಎಎಪಿ ಎರಡನೇ ಸ್ಥಾನಕ್ಕೆ ಕುಸಿಯಲಿದೆ ಎಂದು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ.

ಎರಡು ಚುನಾವಣೋತ್ತರ ಸಮೀಕ್ಷೆಗಳು ಮಾತ್ರ ಆಮ್ ಆದ್ಮಿ ಪಕ್ಷ (ಎಎಪಿ) ವಿಜಯಶಾಲಿಯಾಗಿ, ಮತ್ತೆ ಅಧಿಕಾರದ ಗದ್ದುಗೆ ಏರಲಿದೆ ಎಂದಿವೆ.

‘ಇಂಡಿಯಾ’ ಮೈತ್ರಿಕೂಟದ ಅಂಗಪಕ್ಷವೂ ಆಗಿರುವ ಕಾಂಗ್ರೆಸ್ ಉತ್ತಮ ಸಾಧನೆ ಮಾಡುವಲ್ಲಿ ಮತ್ತೆ ವಿಫಲಗೊಳ್ಳಲಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರ್ಕಾರ ರಚಿಸಲು ಎಎಪಿ ಮತ್ತು ಬಿಜೆಪಿ ನಡುವೆ ತೀವ್ರ ಹಣಾಹಣಿ ಇರುವುದನ್ನು ಬಹುತೇಕ ಸಮೀಕ್ಷೆಗಳು ಹೇಳಿವೆ.

ಫೆಬ್ರುವರಿ 8ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ನಿಚ್ಚಳವಾಗಲಿದೆ.

1.55 ಕೋಟಿ ಅರ್ಹ ಮತದಾರರಿದ್ದು, ಸಂಜೆ 5 ಗಂಟೆ ಹೊತ್ತಿಗೆ ಶೇ 58ರಷ್ಟು ಮತದಾನವಾಗಿತ್ತು ಎಂದು ಚುನಾವಣಾ ಆಯೋಗ ತಿಳಿಸಿದೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ 36 ಸ್ಥಾನಗಳ ಅಗತ್ಯವಿದೆ. ಪ್ರಸ್ತುತ ಎಎಪಿ 62, ಬಿಜೆಪಿ 8 ಶಾಸಕರನ್ನು ಹೊಂದಿವೆ.

ಒಟ್ಟು 70 ಕ್ಷೇತ್ರಗಳ ದೆಹಲಿ ವಿಧಾನಸಭೆಗೆ ಕಳೆದ ಎರಡು ಬಾರಿ ಚುನಾವಣೆಯಲ್ಲಿ 60ಕ್ಕಿಂತಲೂ ಹೆಚ್ಚು ಸ್ಥಾನವನ್ನು ಎಎಪಿ ಪಡೆದು ಅಧಿಕಾರಕ್ಕೇರಿತ್ತು. ಆದರೆ ಈ ಬಾರಿ ಅದರ ಅರ್ಧದಷ್ಟು ಕ್ಷೇತ್ರಗಳನ್ನು ಮಾತ್ರ ಗೆಲಲ್ಲಿವೆ ಎಂದಿವೆ ಸಮೀಕ್ಷೆಗಳು.

ಆದರೆ ದೈನಿಕ್ ಭಾಸ್ಕರ್ ಸಮೀಕ್ಷೆಯಲ್ಲಿ ಎಎಪಿಗೆ ಸರಳ ಬಹುಮತ ಸಿಗಲಿದೆ ಎಂದು ಅಂದಾಜಿಸಲಾಗಿದೆ. ಸುದರ್ಶನ್ ಟಿ.ವಿ. ಸಮಬಲದ ಹೋರಾಟ ಎಂದಿದೆ.

2013ರಲ್ಲಿ ಎಎಪಿ 28 ಕ್ಷೇತ್ರಗಳನ್ನು ಗೆದ್ದುಕೊಂಡಿತು. ಕಾಂಗ್ರೆಸ್ 8 ಹಾಗೂ ಬಿಜೆಪಿ 31 ಕ್ಷೇತ್ರಗಳನ್ನು ಗೆದ್ದುಕೊಂಡಿತು.

2015ರಲ್ಲಿ ಎಎಪಿ 67 ಕ್ಷೇತ್ರಗಳನ್ನು ಹಾಗೂ ಬಿಜೆಪಿ ಕೇವಲ 3 ಕ್ಷೇತ್ರಗಳನ್ನು ಗೆದ್ದಿತ್ತು. ಕಾಂಗ್ರೆಸ್ ಒಂದೂ ಕ್ಷೇತ್ರಗಳನ್ನು ಗೆದ್ದಿರಲಿಲ್ಲ.

2020ರ ಚುನಾವಣೆಯಲ್ಲಿ ಎಎಪಿ 62 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಬಿಜೆಪಿ 8 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಆ ಚುನಾವಣೆಯಲ್ಲೂ ಕಾಂಗ್ರೆಸ್ನದ್ದು ಶೂನ್ಯ ಸಾಧನೆ.

ಹಾಲಿ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷ (ಎಎಪಿ) ಮೂರನೇ ಬಾರಿಗೆ ಗದ್ದುಗೆ ಏರಲು ಕಸರತ್ತು ನಡೆಸಿದೆ. ಎರಡು ದಶಕಗಳ ಬಳಿಕ ಅಧಿಕಾರ ಪಡೆಯಲು ಬಿಜೆಪಿ ಪ್ರಯಾಸಪಟ್ಟಿದೆ. ಎರಡು ಪಕ್ಷಗಳ ಪೈಪೋಟಿಯಲ್ಲಿ ಅಧಿಕಾರಕ್ಕೇರುವ ಕನಸನ್ನು ಕಾಂಗ್ರೆಸ್ ಕಾಣುತ್ತಿದೆ. ಹೀಗಾಗಿ ದೆಹಲಿಯಲ್ಲಿನ ತ್ರಿಕೋನ ಸ್ಪರ್ಧೆಯಲ್ಲಿ ಗದ್ದುಗೆ ಯಾರ ಪಾಲಾಗಲಿದೆ ಎಂಬುದರತ್ತ ಇಡೀ ದೇಶ ಕಣ್ಣಿಟ್ಟಿದೆ.
.Delhi Elections 2025 Voting Live: ಸಂಜೆ 5 ಗಂಟೆ ಹೊತ್ತಿಗೆ ಶೇ 57.70ರಷ್ಟು ಮತದಾನ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.