ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಯಾಣಿಕ ರೈಲಿನ ಬೋಗಿಗೆ ಬೆಂಕಿ: ಯಾವುದೇ ಅನಾಹುತ ಇಲ್ಲ

Published 13 ಫೆಬ್ರುವರಿ 2024, 11:03 IST
Last Updated 13 ಫೆಬ್ರುವರಿ 2024, 11:03 IST
ಅಕ್ಷರ ಗಾತ್ರ

ನವದೆಹಲಿ: ಪ್ರಯಾಣಿಕರ ರೈಲಿನ ಬೋಗಿಯೊಂದಕ್ಕೆ ಆಕಶ್ಮಿಕವಾಗಿ ಬೆಂಕಿ ತಗುಲಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ದೆಹಲಿಯ ಪಟೇಲ್‌ ನಗರ ರೈಲು ನಿಲ್ದಾಣದಲ್ಲಿ ಮಂಗಳವಾರ ಮಧ್ಯಾಹ್ನ 1.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಿರ್ಸಾ ಎಕ್ಸ್‌ಪ್ರೆಸ್‌ ರೈಲಿನ ಬೋಗಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಪ್ರಯಾಣಿಕರನ್ನು ಕೆಳಗೆ ಇಳಿಸಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಲಾಯಿತು. ತಕ್ಷಣಕ್ಕೆ ಅವರು ಆಗಮಿಸಿ ಬೆಂಕಿ ನಂದಿಸಿದರು ಎಂದು ಪೊಲೀಸರು ಹೇಳಿದ್ದಾರೆ. 

ಘಟನೆಯಲ್ಲಿ ರೈಲಿನ ಬೋಗಿಯೊಂದು ಸುಟ್ಟಿದ್ದು ಯಾವುದೇ ಪ್ರಯಾಣಿಕರಿಗೆ ಅನಾಹುತವಾಗಿಲ್ಲ. ಈ ಸಂಬಂಧ ತನಿಖೆಗೆ ಆದೇಶ ಮಾಡಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ಖಚಿತಪಡಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT