ನವದೆಹಲಿ: ಕಾರ್ಮಿಕರ ಹೆಣ್ಣುಮಕ್ಕಳ ಸಾಮೂಹಿಕ ವಿವಾಹ, ಕಾರ್ಮಿಕ ಚೌಕಗಳಲ್ಲಿ ಮೊಬೈಲ್ ಹೆಲ್ತ್ ಕ್ಲಿನಿಕ್ ಹಾಗೂ ನೇರ ಆರ್ಥಿಕ ನೆರವು ಸೇರಿದಂತೆ ಹಲವು ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳನ್ನು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಶುಕ್ರವಾರ(ಮೇ 1) ಘೋಷಿಸಿದ್ದಾರೆ.

ಅಂತರರಾಷ್ಟ್ರೀಯ ಕಾರ್ಮಿಕ ದಿನದ ಪ್ರಯುಕ್ತ ಧೀರ್ಪುರದ ಸಂತ ನಿರಂಕಾರಿ ಆಸ್ಪತ್ರೆ ನಿರ್ಮಾಣ ಸ್ಥಳದಲ್ಲಿ ಅಲ್ಲಿನ ಕಾರ್ಮಿಕರೊಂದಿಗೆ ಸಂವಾದ ನಡೆಸಿದ ರೇಖಾ ಗುಪ್ತಾ, ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ ನಮ್ಮ ಸರ್ಕಾರವು ಕಾರ್ಮಿಕರ ಕಲ್ಯಾಣಕ್ಕೆ ಬದ್ಧವಾಗಿದೆ ಎಂದು ಹೇಳಿದರು.

ದೆಹಲಿ ಸರ್ಕಾರದಿಂದ ಶೀಘ್ರದಲ್ಲೇ ಗರ್ಭಿಣಿ ಕಾರ್ಮಿಕರಿಗೆ ಗೌರವಧನವನ್ನು ನೀಡಲಾಗುವುದು, ಪ್ರತಿ ವರ್ಷ ಎರಡು ಸಾಮೂಹಿಕ ವಿವಾಹಗಳನ್ನು ನಡೆಸಲಾಗುವುದು ಎಂದು ಅವರು ಘೋಷಿಸಿದರು.

ಕಾರ್ಮಿಕರ ಮದುವೆ ಮತ್ತು ಅವರ ಮಕ್ಕಳ ಶಿಕ್ಷಣಕ್ಕೂ ಸಹಾಯ ಮಾಡಲು ಯೋಜನೆಗಳನ್ನು ರೂಪಿಸುತ್ತಿದೆ. ಕಾರ್ಮಿಕರು, ವಿವಿಧ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ದೆಹಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಿ ಎಂದು ಹೇಳಿದರು.

ದೆಹಲಿಯಲ್ಲಿ ಮಾಲಿನ್ಯದಿಂದಾಗಿ ನಿರ್ಮಾಣ ಚಟುವಟಿಕೆಗಳು ನಿರ್ಬಂಧಿಸಲ್ಪಟ್ಟಾಗ, ರಾಜ್ಯ ಸರ್ಕಾರವು ನೋಂದಾಯಿತ ಕಾರ್ಮಿಕರಿಗೆ ₹10,000 ಆರ್ಥಿಕ ಸಹಾಯವನ್ನು ಮಾಡಿತ್ತು. ನಗರದಲ್ಲಿ ಕಾರ್ಮಿಕರ ಕೌಶಲ್ಯ ಮತ್ತು ನಿಯೋಜನೆಗಾಗಿ ಕಾರ್ಮಿಕ ಇಲಾಖೆ ಕೆಲಸ ಮಾಡುತ್ತಿದೆ ಎಂದು ಕಾರ್ಮಿಕ ಸಚಿವ ಕಪಿಲ್ ಮಿಶ್ರಾ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.