ನವದೆಹಲಿ: ಬಿಜೆಪಿ ನೇತೃತ್ವದ ದೆಹಲಿ ಸರ್ಕಾರವು ವಾರ್ಷಿಕ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ (ಎಲ್ಎಡಿ) ನಿಧಿಯನ್ನು ₹15 ಕೋಟಿಯಿಂದ ₹5 ಕೋಟಿಗೆ ಇಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಅಕ್ಟೋಬರ್ನಲ್ಲಿ ದೆಹಲಿಯಲ್ಲಿ ಆಡಳಿತ ಪಕ್ಷವಾಗಿದ್ದ ಆಮ್ ಆದ್ಮಿ ಪಕ್ಷವು (ಎಎಪಿ) ವಿಧಾನಸಭಾ ಚುನಾವಣೆಗೆ ಕೆಲವು ತಿಂಗಳುಗಳ ಮುನ್ನ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯನ್ನು ₹10 ಕೋಟಿಯಿಂದ ₹15 ಕೋಟಿಗೆ ಹೆಚ್ಚಿಸಿತ್ತು. ಈ ವರ್ಷದ ಫೆಬ್ರುವರಿಯಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಸೋಲು ಕಂಡಿತ್ತು.

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ನೇತೃತ್ವದಲ್ಲಿ ಮೇ 2ರಂದು ನಡೆದಿದ್ದ ಸಂಪುಟ ಸಭೆಯಲ್ಲಿ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯನ್ನು ₹15 ಕೋಟಿಯಿಂದ ₹5 ಕೋಟಿ ಇಳಿಸಲು ನಿರ್ಧಾರ ಕೈಗೊಳ್ಳಲಾಗಿತ್ತು. ಈ ಕುರಿತು ದೆಹಲಿ ಸರ್ಕಾರದ ನಗರಾಭಿವೃದ್ಧಿ ಇಲಾಖೆಯು ಆದೇಶ ಹೊರಡಿಸಿದೆ.

ಇತ್ತೀಚಿಗಷ್ಟೇ ಬಿಜೆಪಿ ಶಾಸಕರೊಬ್ಬರು ನಮ್ಮ ಸರ್ಕಾರವು ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಗಾಗಿ ₹350 ಕೋಟಿ ಮೀಸಲಿಟ್ಟಿದೆ ಎಂದು ಹೇಳಿದ್ದರು. ಇದರನ್ವಯ ದೆಹಲಿಯ 70 ಶಾಸಕರಿಗೆ ತಲಾ ₹5 ಕೋಟಿಯಂತೆ ವಿಂಗಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.