ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎ.ರಾಜಾ ಖಲಾಸೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಒಪ್ಪಿಗೆ

Published 22 ಮಾರ್ಚ್ 2024, 11:31 IST
Last Updated 22 ಮಾರ್ಚ್ 2024, 11:31 IST
ಅಕ್ಷರ ಗಾತ್ರ

ನವದೆಹಲಿ: 2ಜಿ ತರಂಗಾಂತರ ಹಂಚಿಕೆ ಹಗರಣದಲ್ಲಿ ಮಾಜಿ ಟೆಲಿಕಾಂ ಸಚಿವ ಎ.ರಾಜಾ ಹಾಗೂ ಇತರರನ್ನು ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ದೆಹಲಿ ಹೈಕೋರ್ಟ್‌ ಶುಕ್ರವಾರ ಸಮ್ಮತಿಸಿದೆ.

ನ್ಯಾಯಮೂರ್ತಿ ದಿನೇಶ್‌ ಕುಮಾರ್‌ ಶರ್ಮಾ, ‘ಲಭ್ಯವಿರುವ ದಾಖಲೆಗಳು, ಕಕ್ಷಿದಾರರ ವಕೀಲರು ಸಲ್ಲಿಸಿರುವ ಹೇಳಿಕೆಗಳನ್ನು ಪರಿಶೀಲಿಸಿದಾಗ, ಸಿಬಿಐ ದಾಖಲಿಸಿರುವ ಪ್ರಕರಣ ಮತ್ತು ಅದಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಮೇಲ್ಮನವಿಗಳ ಕುರಿತು ವಿಸ್ತೃತ ವಿಚಾರಣೆ ಅಗತ್ಯವಿದೆ’ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ, ‘ಮೇ ನಲ್ಲಿ ಅರ್ಜಿ ವಿಚಾರಣೆಗೆ ಪಟ್ಟಿ ಮಾಡಿ’ ಎಂದು ತಿಳಿಸಿದರು. ಹಾಗೆಯೇ ಪ್ರಕರಣದ ಬಗ್ಗೆ ಉನ್ನತ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲೂ ಅನುಮತಿ ಇದೆ ಎಂದರು.

ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಬೇಕೆಂದು ಸಿಬಿಐ 2018ರಲ್ಲಿ ಅರ್ಜಿ ಸಲ್ಲಿಸಿತ್ತು. ಆರು ವರ್ಷಗಳ ನಂತರ ಹೈಕೋರ್ಟ್‌ ಅನುಮತಿ ನೀಡಿದೆ. 2017ರಲ್ಲಿ ವಿಶೇಷ ನ್ಯಾಯಾಲಯವೊಂದು ರಾಜಾ, ಡಿಎಂಕೆ ಸಂಸದ ಕನಿಮೋಳಿ ಮತ್ತು ಇತರರನ್ನು ಖುಲಾಸೆಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT