ನವದೆಹಲಿ: ಕೋವಿಶೀಲ್ಡ್ ಲಸಿಕೆಯ ಎರಡನೇ ಡೋಸ್ ಪಡೆಯಲು ನಿಗದಿಪಡಿಸಿರುವ 12ರಿಂದ 16 ವಾರಗಳ ಅಂತರವನ್ನು 50 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಎಂಟು ವಾರಗಳಿಗೆ ಇಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ.

ಈ ಕುರಿತು ಡಾ. ಸಿದ್ಧಾರ್ಥ್ ದೇ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ನ್ಯಾಯಪೀಠವು, ‘ಈ ಕುರಿತ ಯಾವುದೇ ಕಾರ್ಯ ವಿಧಾನದ ಬಗ್ಗೆ ನಿಮಗೆ ತಿಳಿದಿದೆಯೇ? ಡೋಸ್‌ನ ಪ್ರಮಾಣವನ್ನು ಹೇಗೆ ನಿಗದಿಪಡಿಸಲಾಗಿದೆ? ಯಾರು ನಿಗದಿಪಡಿಸಿದ್ದಾರೆ? ಎಂದು ದೇ ಅವರ ಪರ ವಕೀಲರ ಕುಲದೀಪ್ ಜೌಹರಿ ಅವರನ್ನು ಪ್ರಶ್ನಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ಜೌಹರಿ ಅವರು, ಇದಕ್ಕಾಗಿ ತಜ್ಞರ ಮತ್ತು ಕಾರ್ಯನಿರತರ ಗುಂಪುಗಳಿವೆ ಎಂದರು. ಅಲ್ಲದೆ ಬ್ರಿಟನ್‌ನ ವಿಜ್ಞಾನಿಗಳು ನಡೆಸಿದ ಅಧ್ಯಯನಗಳ ಆಧಾರದ ಮೇಲೆ, ಕೋವಿಡ್–19ರ ಹೊಸ ರೂಪಾಂತರಗಳನ್ನು ಗಮನದಲ್ಲಿಟ್ಟುಕೊಂಡು ಲಸಿಕೆಯ ಎರಡು ಡೋಸ್‌ಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಅವಶ್ಯಕತೆಯಿದೆ ಎಂದು ಕೋರಿದರು. ಈ ವಾದವನ್ನು ನ್ಯಾಯಪೀಠ ಮಾನ್ಯ ಮಾಡಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.