ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾ ಶಿಕ್ಷಕರನ್ನು ಅನ್ಯ ಕಾರ್ಯಕ್ಕೆ ಬಳಸಬಾರದು: ದೆಹಲಿ ಹೈಕೋರ್ಟ್

Last Updated 27 ಜನವರಿ 2019, 19:42 IST
ಅಕ್ಷರ ಗಾತ್ರ

ನವದೆಹಲಿ: ಬೋಧನೆ ಹೊರತುಪಡಿಸಿ ಅನ್ಯ ಕಾರ್ಯಗಳಿಗೆಶಾಲಾ ಶಿಕ್ಷಕರನ್ನು ನಿಯೋಜಿಸಬಾರದು ಎಂದು ದೆಹಲಿ ಹೈಕೋರ್ಟ್‌ ಹೇಳಿದೆ.

ಉಚಿತ ಮತ್ತು ಕಡ್ಡಾಯ ಶಿಕ್ಷಣ (ಆರ್‌ಟಿಇ) ಕಾಯ್ದೆ ಹಾಗೂ ನಿಯಮಾವಳಿಯ ವ್ಯಾಪ್ತಿ ಮೀರಿದ ಕೆಲಸಗಳಿಗೆಶಿಕ್ಷಕರನ್ನು ಬಳಸಿಕೊಳ್ಳಬಾರದು ಎಂದುಮಹಾನಗರ ಪಾಲಿಕೆಗಳಿಗೆ ಹೈಕೋರ್ಟ್‌ ಸೂಚಿಸಿದೆ.

ದೆಹಲಿ ಮಹಾನಗರ ಪಾಲಿಕೆ ಅಧೀನ ಶಾಲೆಗಳ ಅಖಿಲ ದೆಹಲಿ ಪ್ರಾಥಮಿಕ ಶಿಕ್ಷಕ ಸಂಘ ಶಿಕ್ಷಕರನ್ನು ಹಾಗೂ ಪ್ರಾಚಾರ್ಯರನ್ನು ಅನ್ಯ ಕಾರ್ಯಗಳಿಗೆ ನಿಯೋಜಿಸಲಾಗುತ್ತಿರುವ ಕುರಿತು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ.ಹರಿ ಶಂಕರ್‌ ಅವರು, ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಕೆಲಸ ಮಹತ್ವದ್ದಾಗಿದೆ.

ಶಿಕ್ಷಕರನ್ನು ಬೇರೆ ಕೆಲಸಗಳಿಗೆ ನಿಯೋಜಿಸಿದರೆಮಕ್ಕಳು ಶಿಕ್ಷಣದಿಂದ ವಂಚಿತರಾಗುವ ಸಾಧ್ಯತೆ ಇದೆ. ಆದ್ದರಿಂದ ಬೋಧನೆ ಹೊರತುಪಡಿಸಿ ಬೇರೆ ಕೆಲಸಕ್ಕೆ ಅವರನ್ನುನಿಯೋಜಿಸಬಾರದು ಎಂದು ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT