ನವದೆಹಲಿ: ಕರ್ತವ್ಯಕ್ಕೆ ಹಾಜರಾಗುವಂತೆ ಮುಷ್ಕರ ನಿರತ ಏಮ್ಸ್ ಶುಶ್ರೂಷಕರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ.

ಆರನೇ ವೇತನ ಆಯೋಗದ ಅನುಷ್ಠಾನ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶುಶ್ರೂಷಕರ ಒಕ್ಕೂಟ ಸೋಮವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದೆ.

ಶುಶ್ರೂಷಕರ ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಏಮ್ಸ್ ಭರವಸೆ ನೀಡಿರುವುದನ್ನು ಆಧರಿಸಿ ಮುಷ್ಕರ ಮುಂದುವರಿಸದಂತೆ ಹೈಕೋರ್ಟ್ ನ್ಯಾಯಮೂರ್ತಿ ನವೀನ್ ಚಾವ್ಲಾ ಆದೇಶಿಸಿದ್ದಾರೆ.

ಈ ಸಂಬಂಧ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಮುಂದಿನ ವಿಚಾರಣೆಯನ್ನು 2021ರ ಜನವರಿ 18ಕ್ಕೆ ನಿಗದಿ ಪಡಿಸಿದೆ. ಮುಷ್ಕರ ನಿರತರೊಂದಿಗೆ ಮಾತುಕತೆ ನಡೆಸಲು ಏಮ್ಸ್ ಆಡಳಿತ ಮಂಡಳಿಯು ಆಹ್ವಾನ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.