ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೇಜ್ರಿವಾಲ್‌ಗೆ ಸಮನ್ಸ್: ವಿವರಣೆ ಕೇಳಿ ಇ.ಡಿಗೆ ದೆಹಲಿ ಹೈಕೋರ್ಟ್ ನೋಟಿಸ್

Published 20 ಮಾರ್ಚ್ 2024, 7:01 IST
Last Updated 20 ಮಾರ್ಚ್ 2024, 7:01 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ನೀಡಲಾಗಿರುವ ಸರಣಿ ಸಮನ್ಸ್‌ ಸಂಬಂಧ ವಿವರಣೆ ಕೇಳಿ ದೆಹಲಿ ಹೈಕೋರ್ಟ್‌ ಜಾರಿ ನಿರ್ದೇಶನಾಲಯಕ್ಕೆ ಬುಧವಾರ ನೋಟಿಸ್‌ ಜಾರಿ ಮಾಡಿದೆ.

ತಮಗೆ ನೀಡಿರುವ ಸರಣಿ ನೋಟಿಸ್‌ಗಳನ್ನು ಪ್ರಶ್ನಿಸಿ ಕೇಜ್ರಿವಾಲ್ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಏಪ್ರಿಲ್ 22ಕ್ಕೆ ಮುಂದಿನ ವಿಚಾರಣೆ ನಿಗದಿಪಡಿಸಿದೆ.

‘ನಾವು ಇದಕ್ಕೆ ಉತ್ತರಿಸುತ್ತೇವ’ ಎಂದು ಜಾರಿ ನಿರ್ದೇಶನಾಲಯ ನ್ಯಾಯಾಲಯದ ಮುಂದೆ ಹೇಳಿದ್ದಾಗಿ ಸುದ್ದಿಸಂಸ್ಥೆ ’ಎಎನ್‌ಐ’ ವರದಿ ಮಾಡಿದೆ.

ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ವಿಕ್ರಮ್ ಚೌಧರಿ ಅವರು ಕೇಜ್ರಿವಾಲ್‌ ಪರ ವಾದ ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT