ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಸಂಸದ, ಜೈಲಿನಲ್ಲಿರುವ ಶೇಖ್ ಅಬ್ದುಲ್ ರಶೀದ್ ಅಲಿಯಾಸ್ ಎಂಜಿನಿಯರ್ ರಶೀದ್ ಅವರು ಸಂಸತ್ತಿನ ಅಧಿವೇಶನಕ್ಕೆ ಹಾಜರಾಗಲು ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ನಿಲುವು ತಿಳಿಸುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ದೆಹಲಿ ಹೈಕೋರ್ಟ್ ಬುಧವಾರ ನಿರ್ದೇಶಿಸಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ 2017ರಲ್ಲಿ ನಡೆದ ಭಯೋತ್ಪಾದನಾ ಚಟುವಟಿಕೆಗಳಿಗೆ ಹಣ ನೀಡಿದ ಆರೋಪ ಎದುರಿಸುತ್ತಿರುವ ರಶೀದ್ ಅವರನ್ನು ಕಾನೂನು ಬಾಹಿರ ಚಟುವಟಿಕೆ ತಡೆ ಕಾನೂನಿನ (ಯುಎಪಿಎ) ಅಡಿಯಲ್ಲಿ ಬಂಧಿಸಲಾಗಿದೆ. ಅವರು 2019ರಿಂದ ಜೈಲಿನಲ್ಲಿದ್ದಾರೆ.

ಜೈಲಿನಲ್ಲಿದ್ದುಕೊಂಡೇ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ರಶೀದ್, ಪೆರೋಲ್ ಅಥವಾ ಮಧ್ಯಂತರ ಜಾಮೀನು ನೀಡಲು ವಿಚಾರಣಾ ನ್ಯಾಯಾಲಯ ನಿರಾಕರಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾಯಮೂರ್ತಿ ಪ್ರತಿಭಾ ಎಂ. ಸಿಂಗ್ ಮತ್ತು ನ್ಯಾ. ರಜನೀಶ್ ಕುಮಾರ್ ಗುಪ್ತಾ ಅವರನ್ನೊಳಗೊಂಡ ಪೀಠವು ಈ ಸಂಬಂಧ ಎನ್ಐಎಗೆ ನೋಟಿಸ್ ಜಾರಿ ಮಾಡಿದೆ.

ವಿಚಾರಣೆಯನ್ನು ಮಾರ್ಚ್ 18ಕ್ಕೆ ಮುಂದೂಡಲಾಗಿದ್ದು, ಆಕ್ಷೇಪಣೆಗಳಿದ್ದರೆ ಸೋಮವಾರದೊಳಗೆ ಸಲ್ಲಿಸುವಂತೆ ಸೂಚಿಸಿದೆ.

ನ್ಯಾಯಾಲಯದಲ್ಲಿ ರಶೀದ್ ಪರ ಹಾಜರಿದ್ದ ಹಿರಿಯ ವಕೀಲ ಎನ್.ಹರಿಹರನ್ ಅವರು, ಸಂಸತ್ತಿನ ಅಧಿವೇಶನ ಏಪ್ರಿಲ್ 4ರವರೆಗೆ ನಡೆಯಲಿದೆ. ರಶೀದ್ ಅವರ ಕ್ಷೇತ್ರಕ್ಕೆ ಯಾವುದೇ ವಿಶೇಷ ಪ್ರಾತಿನಿಧ್ಯ ದೊರೆತಿಲ್ಲ ಎಂದು ವಾದಿಸಿದ್ದಾರೆ.

ರಶೀದ್ ಅವರು ಬಾರಾಮುಲ್ಲಾ ಸಂಸದರಾಗಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಅವರು ಹಾಲಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಎದುರು ಜಯ ಸಾಧಿಸಿದ್ದಾರೆ.
.ಭಯೋತ್ಪಾದಕರಿಗೆ ಹಣ: ಸಂಸದ ರಶೀದ್ ಎಂಜಿನಿಯರ್ ಜಾಮೀನು ಅರ್ಜಿ ವಿಚಾರಣೆ ಆ. 28ಕ್ಕೆ.ಮಧ್ಯಂತರ ಜಾಮೀನು ಅವಧಿ ಮುಕ್ತಾಯ: ಸಂಸದ ಎಂಜಿನಿಯರ್ ರಶೀದ್ ಜೈಲಿಗೆ ಶರಣು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.