ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಆಸ್ಪತ್ರೆ ಅಗ್ನಿ ಅವಘಡ: ಆರೋಗ್ಯಾಧಿಕಾರಿಗಳ ಸಭೆ ಕರೆದ ಸೌರಭ್ ಭಾರದ್ವಾಜ್

Published 27 ಮೇ 2024, 5:06 IST
Last Updated 27 ಮೇ 2024, 5:06 IST
ಅಕ್ಷರ ಗಾತ್ರ

ನವದೆಹಲಿ: ಪೂರ್ವ ದೆಹಲಿಯ ವಿವೇಕ್‌ ವಿಹಾರ್‌ ಪ್ರದೇಶದಲ್ಲಿರುವ ‘ಬೇಬಿ ಕೇರ್ ನ್ಯೂಬಾರ್ನ್’ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಏಳು ನವಜಾತ ಶಿಶುಗಳು ಮೃತಪಟ್ಟಿವೆ. ಪ್ರಕರಣ ಸಂಬಂಧ ದೆಹಲಿ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಸೋಮವಾರ ಆರೋಗ್ಯಾಧಿಕಾರಿಗಳ ಸಭೆ ಕರೆದಿದ್ದಾರೆ.

ದೆಹಲಿಯ ಸೆಕ್ರೆಟರಿಯೇಟ್‌ನಲ್ಲಿ ಸಭೆ ನಡೆಯಲಿದ್ದು, ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿರುವರು. ಆಸ್ಪತ್ರೆಯಲ್ಲಿ ನಡೆದ ಅವಘಡದ ಬಗ್ಗೆ ಚರ್ಚೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

ವಿವೇಕ್ ವಿಹಾರ್‌ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಅಗ್ನಿ ಅವಘಡದಲ್ಲಿ 7 ಶಿಶುಗಳು ಮೃತಪಟ್ಟು, 5 ಶಿಶುಗಳು ಗಾಯಗೊಂಡಿದ್ದವು. ಗಾಯಗೊಂಡ ಶಿಶುಗಳಿಗೆ ಬೇರೊಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಸಂಬಂಧ ಆಸ್ಪತ್ರೆ ಮಾಲೀಕ ಡಾ.ನವೀನ್‌ ಕಿಚಿ ಎಂಬುವವರನ್ನು ಬಂಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT