ನವದೆಹಲಿ: ದಕ್ಷಿಣ ದೆಹಲಿಯ ಮಾಲ್ವಿಯಾ ನಗರದಲ್ಲಿನ ರೆಸ್ಟೋರೆಂಟ್ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅದರಿಂದ ತಪ್ಪಿಸಿಕೊಳ್ಳಲು ಕಟ್ಟಡ ಮೂರನೇ ಮಹಡಿಯಲ್ಲಿದ್ದ ಮಹಿಳೆಯೊಬ್ಬರು ತನ್ನ ಮಗುವನ್ನು ಹಿಡಿದುಕೊಂಡು ಕಟ್ಟಡದ ಮೂರನೇ ಮಹಡಿಯಿಂದ ಕೆಳಗೆ ಜಿಗಿದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಜನಸಂದಣಿಯಿಂದ ಕೂಡಿದ ಹೌಜ್ ರಾಣಿ ಪ್ರದೇಶದ ಫ್ಲೋರಿಶ್ ಸ್ಟೇ ಬೆಡ್-ಅಂಡ್-ಬ್ರೇಕ್ಫಾಸ್ಟ್ ಹೋಟೆಲ್ನಲ್ಲಿ ಬುಧವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದೊಳಗೆ ನೂರಾರು ಜನರು ಸಿಲುಕಿಕೊಂಡಿದ್ದರು. ಕೆಲವೇ ಕ್ಷಣಗಳಲ್ಲಿ ದಟ್ಟವಾದ ಹೊಗೆಯು ಕಟ್ಟಡವನ್ನು ಆವರಿಸಿದಾಗ, ಅದರೊಳಗಿದ್ದ ಜನರು ಕಿಟಕಿ ಗಾಜುಗಳನ್ನು ಒಡೆದು ಸಹಾಯಕ್ಕಾಗಿ ಕೂಗುತ್ತಿದ್ದರು ಎಂದು ಹೇಳಿದ್ದಾರೆ.

ಒಳಗೆ ಸಿಲುಕಿರುವವರನ್ನು ರಕ್ಷಿಸುವ ಪ್ರಯತ್ನದಲ್ಲಿ ಸ್ಥಳೀಯರು ಕೆಳಗೆ ನೆಲದ ಮೇಲೆ ಹಾಸಿಗೆಗಳನ್ನು ಹಾಸಿದ್ದರು. ಆ ವೇಳೆ ಮಗುವನ್ನು ಹಿಡಿದುಕೊಂಡಿದ್ದ ತಾಯಿಯು, ಅಲ್ಲಿಂದ ಹೊರಗೆ ಬರಲು ಯಾವುದೇ ದಾರಿ ಕಾಣದೇ, ಮೂರನೇ ಮಹಡಿಯಿಂದ ಕೆಳಗೆ ಜಿಗಿದಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಮಹಿಳೆಯು ಮಗುವಿನೊಂದಿಗೆಯೇ ಹಾಸಿಗೆಯ ಮೇಲೆ ಬಿದ್ದಿದ್ದು, ಕೆಲವು ಚಿಕ್ಕಪುಟ್ಟ ಗಾಯಗಳಾಗಿವೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಘಟನೆಯಲ್ಲಿ ವಿದೇಶಿಯರು ಸೇರಿದಂತೆ ಕನಿಷ್ಠ 21 ಮಂದಿ ಮೃತಪಟ್ಟಿದ್ದಾರೆ. 40ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.