ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹವಾಮಾನ ಸುಧಾರಿಸಲು ಹಾಗೂ ಮಾಲಿನ್ಯ ಸಮಸ್ಯೆಗಳನ್ನು ಬಗೆಹರಿಸಲು ದಟ್ಟವಾದ ಮರಗಳನ್ನು ಒಳಗೊಂಡಂತೆ 100 ಆಮ್ಲಜನಕ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ ಎಂದು ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಶುಕ್ರವಾರ ಘೋಷಿಸಿದ್ದಾರೆ.

ಉತ್ತರ ದೆಹಲಿಯ ಮುಖ್ಮೆಲ್ಲಪುರ ಗ್ರಾಮದಲ್ಲಿ ಮೂರು ಎಕರೆ ಭೂಮಿಯಲ್ಲಿ ಅಭಿವೃದ್ಧಿಪಡಿಸಲಿರುವ ಉದ್ಯಾನವನಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ, ರಾಜಧಾನಿದಲ್ಲಿ ಇಂತಹ ಉದ್ಯಾನವನ ಇದೇ ಮೊದಲು ಎಂದು ಹೇಳಿದ್ದಾರೆ.

ದೆಹಲಿಯನ್ನು ಅನೇಕ ವರ್ಷಗಳ ಕಾಲ ಗ್ಯಾಸ್ ಚೇಂಬರ್ ಆಗಿ ಪರಿವರ್ತಿಸಲಾಗಿತ್ತು. ಆದರೆ ಮಾಲಿನ್ಯ ಸಮಸ್ಯೆಗಳನ್ನು ಬಗೆಹರಿಸಲು ಯಾರೂ ಕಾಳಜಿ ವಹಿಸಿರಲಿಲ್ಲ ಎಂದು ಹೇಳಿದ್ದಾರೆ.

ಮಾಲಿನ್ಯ ಸಮಸ್ಯೆಯನ್ನು ನಿವಾರಿಸಲು ನಮ್ಮ ಸರ್ಕಾರ ಕಳೆದೊಂದು ವರ್ಷದಿಂದ ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತಿದೆ. ಈ ಉದ್ಯಾನವನಗಳು ಇದರ ಭಾಗವಾಗಿವೆ ಎಂದು ಹೇಳಿದ್ದಾರೆ.

ದಟ್ಟವಾದ ಮರಗಳನ್ನು ಹೊಂದಿರುವ ಈ ಉದ್ಯಾನವನಗಳು ದೆಹಲಿಗೆ ಅಗತ್ಯವಾಗಿದೆ ಎಂದು ಪ್ರತಿಪಾದಿಸಿದ್ದಾರೆ.
.ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್ಗೆ ಮಧ್ಯಂತರ ಜಾಮೀನು ಮಂಜೂರು.ಕಾರಟಗಿ | ಕಾರ್ಮಿಕರಿಗೂ ಪ್ರೋತ್ಸಾಹಕರ ಯೋಜನೆ ಅಗತ್ಯ: ಬಿ.ಕೆ. ರೇಖಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.