ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಯಾಣಿಕ ಅಸ್ವಸ್ಥ: ವಿಮಾನ ತುರ್ತು ಭೂಸ್ಪರ್ಶ

Published 25 ಆಗಸ್ಟ್ 2023, 13:58 IST
Last Updated 25 ಆಗಸ್ಟ್ 2023, 13:58 IST
ಅಕ್ಷರ ಗಾತ್ರ

ಜೈಪುರ: ದೆಹಲಿಯಿಂದ ಮಧ್ಯಪ್ರದೇಶದ ಜಬಲ್‌ಪುರಕ್ಕೆ ಶುಕ್ರವಾರ ತೆರಳುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಅಸ್ವಸ್ಥರಾದ ಕಾರಣ ವಿಮಾನವನ್ನು ರಾಜಸ್ಥಾನದ ಜೈಪುರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.

ಅಲಯನ್ಸ್‌ ಏರ್‌ ಸಂಸ್ಥೆಯ ವಿಮಾನವು ದೆಹಲಿ ವಿಮಾನ ನಿಲ್ದಾಣದಿಂದ ಹೊರಟ ಕೆಲ ಸಮಯದ ಬಳಿಕ 52 ವರ್ಷದ ವ್ಯಕ್ತಿಯೊಬ್ಬರು ರಕ್ತದೊತ್ತಡ ಕಡಿಮೆಯಾದ ಕಾರಣ ಅಸ್ವಸ್ಥರಾದರು. ಈ ಕಾರಣಕ್ಕೆ ವಿಮಾನವನ್ನು ಜೈಪುರ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಸ್ವಸ್ಥರಾದ ವ್ಯಕ್ತಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ವಿಮಾನವು ಜಬಲ್‌ಪುರಕ್ಕೆ ತೆರಳಿದೆ ಎಂದು ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT