ನವದೆಹಲಿ: ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಬಿಜೆಪಿ ಶಾಸಕ ಅರವಿಂದರ್ ಸಿಂಗ್ ಲವ್ಲಿ ಅವರನ್ನು ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಿದ್ದಾರೆ.

ಫೆಬ್ರುವರಿ 24 ರಂದು ದೆಹಲಿ ನೂತನ ಸರ್ಕಾರದ ಮೊದಲ ಅಧಿವೇಶನ ನಡೆಯಲಿದ್ದು, ಬೆಳಿಗ್ಗೆ 11 ಗಂಟೆಗೆ ಹೊಸದಾಗಿ ಚುನಾಯಿತರಾದ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆಗೆ ಸ್ಪೀಕರ್ ಆಯ್ಕೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಫೆ.25ರಂದು ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಮಹಾಲೇಖಪಾಲರ ವರದಿಗಳನ್ನು (ಸಿಎಜಿ) ಮಂಡಿಸಲಾಗುವುದು. ಫೆ. 26ರಂದು ಲೆಫ್ಟಿನೆಂಟ್ ಗವರ್ನರ್ ಅವರು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ನಡೆಯಲಿದೆ. ನಂತರ ದೆಹಲಿ ವಿಧಾನಸಭೆಯ ಉಪಸಭಾಪತಿ ಅವರನ್ನು ಆಯ್ಕೆ ಮಾಡಲಾಗುವುದು ಎಂದು ಮೂಲಗಳು ಹೇಳಿವೆ.

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದರು. ಇದೇ ವೇಳೆ ಆರು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಬಳಿಕ ನಡೆದ ಮೊದಲ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದ ರೇಖಾ ಗುಪ್ತಾ, ‘ಜನರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯಡಿ ₹5 ಲಕ್ಷ ವೆಚ್ಚದವರೆಗೆ ಉಚಿತ ಚಿಕಿತ್ಸೆ ಒದಗಿಸುವುದು ಹಾಗೂ ಬಾಕಿ ಇರುವ 14 ಸಿಎಜಿ ವರದಿಗಳನ್ನು ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ಮಂಡಿಸಲಾಗುವುದು’ ಎಂದು ಹೇಳಿದ್ದರು.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ನಡೆದ ಚುನಾವಣೆಯಲ್ಲಿ 48 ಕ್ಷೇತ್ರಗಳನ್ನು ಗೆದ್ದು ಬಿಜೆಪಿ 26 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಎಎಪಿ 22 ಸ್ಥಾನಗಳಲ್ಲಿ ಗೆದ್ದಿದ್ದರೆ ಕಾಂಗ್ರೆಸ್ ಸತತ ಮೂರನೇ ಸಲವೂ ಖಾತೆ ತೆರೆಯುವಲ್ಲಿ ವಿಫಲವಾಗಿತ್ತು.
.Delhi Govt: CM ರೇಖಾ ಗುಪ್ತಾ ಸಂಪುಟ ರಚನೆ; ಯಾರಿಗೆ ಯಾವ ಖಾತೆ?.ದೆಹಲಿ ಸಿಎಂ ರೇಖಾ ಗುಪ್ತಾ ಸೇರಿ ಐವರು ಸಚಿವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ!.ಪ್ರಧಾನಿ ಮೋದಿ ಭೇಟಿ ಮಾಡಿದ ದೆಹಲಿ ಸಿಎಂ ರೇಖಾ ಗುಪ್ತಾ; ಅಭಿವೃದ್ಧಿಯ ಸಂಕಲ್ಪ.ದೆಹಲಿ ಅಭಿವೃದ್ಧಿಗಾಗಿ ರೇಖಾ ಗುಪ್ತಾ ಮತ್ತಷ್ಟು ಉತ್ಸಾಹದಿಂದ ಕೆಲಸ: ಪ್ರಧಾನಿ ಮೋದಿ.Delhi CM: ದೆಹಲಿ ಸಿಎಂ ಆಗಿ ಆಯ್ಕೆಯಾದ ರೇಖಾ ಗುಪ್ತಾ ಯಾರು? ಅವರ ಹಿನ್ನೆಲೆ ಏನು?.ರೇಖಾ ಗುಪ್ತಾ ದೆಹಲಿಯ ನೂತನ ಸಿಎಂ: ಮಹಿಳೆಗೆ ಮತ್ತೆ ದೆಹಲಿ ಗದ್ದುಗೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.