ಕಲಬುರಗಿ: ದೆಹಲಿಯಲ್ಲಿ 30 ವರ್ಷದ ಮಹಿಳೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ತೀವ್ರ ಖಂಡನೀಯ ಎಂದು ಅಖಿಲ ಭಾರತ ಜನವಾದಿ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಪದ್ಮಿನಿ ಕಿರಣಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ದಿನದ ಕೂಲಿ ಕೆಲಸ ಮುಗಿಸಿಕೊಂಡು ಪ್ರೀತಂಪೂರ್ ಸ್ಲಂ ಪ್ರದೇಶದ ತಮ್ಮ ಮನೆಗೆ ತೆರಳುತ್ತಿದ್ದ ವಿವಾಹಿತ ಮಹಿಳೆಯನ್ನು ಬಸ್ಸಿನಲ್ಲಿ ಎಳೆದೊಯ್ದು ಚಾಲಕ ಮತ್ತು ನಿರ್ವಾಹಕ ಇಬ್ಬರು ಸೇರಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಆಕೆಯನ್ನು ಹೊರಗೆ ದೂಡಿ ಹೋಗಿರುವ ಘಟನೆ ದೆಹಲಿಯ ನಿರ್ಭಯಾ ಪ್ರಕರಣವನ್ನು ನೆನಪಿಸುತ್ತದೆ’ ಎಂದಿದ್ದಾರೆ.

‘ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಲೇ ಸಾಗುತ್ತಿವೆ. ಆದರೆ ಅಧಿಕಾರಿಗಳು, ರಾಜಕಾರಣಿಗಳು ಕಣ್ಮುಚ್ಚಿ ಕುಳಿತಂತಿದೆ. ಅತ್ಯಾಚಾರಿಗಳಿಗೆ ಯಾವುದೇ ಕಾನೂನಿನ ಭಯವಿಲ್ಲದಂತಾಗಿದೆ. ಅಧಿಕಾರಿಗಳು ಯಾವುದೇ ಪ್ರಭಾವಕ್ಕೆ ಒಳಗಾಗದೆ ತಕ್ಷಣ ಅಪರಾಧಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಹಾಗೆಯೇ ಆ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಕೊಡಬೇಕು ಮತ್ತು ಇಂಥ ಘಟನೆಗಳಿಗೆ ಕಡಿವಾಣ ಹಾಕಬೇಕು’ ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-34-1188144516

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.