ನವದೆಹಲಿ: 'ದೆಹಲಿ ಮೆಟ್ರೋ' ನಿಲ್ದಾಣಗಳಲ್ಲಿ ವಿಶೇಷ ವರ್ಗದ ಪ್ರಯಾಣಿಕರಿಗಾಗಿ ಆದ್ಯತೆಯ ತಪಾಸಣೆ ಸೌಲಭ್ಯವನ್ನು ಕಲ್ಪಿಸಲಾಗಿದೆ.

ದೆಹಲಿ ಮೆಟ್ರೋ ರೈಲು ನಿಗಮ (ಡಿಎಂಆರ್ಸಿ) ಹಾಗೂ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ(ಸಿಐಎಸ್ಎಫ್) ಸಹಯೋಗದೊಂದಿಗೆ ಹೊಸ ಸೌಲಭ್ಯವನ್ನು ಜಾರಿಗೊಳಿಸಲಾಗಿದೆ.

ಅಂಗವಿಕಲರು, ಗರ್ಭಿಣಿಯರು, ಹಿರಿಯ ನಾಗರಿಕರು, ಶಿಶುಗಳೊಂದಿಗೆ ಪ್ರಯಾಣಿಸುವ ಮಹಿಳೆಯರು ಮತ್ತು ಗಂಭೀರ ಗಾಯಗೊಂಡಿರುವ ಪ್ರಯಾಣಿಕರಿಗೆ ಸುಗಮ ಮತ್ತು ಹೆಚ್ಚು ಅನುಕೂಲಕರ ಭದ್ರತಾ ತಪಾಸಣೆ ಪ್ರಕ್ರಿಯೆಯನ್ನು ಒದಗಿಸುವ ಉದ್ದೇಶದಿಂದ ಈ ಸೌಲಭ್ಯವನ್ನು ಜಾರಿಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಾಮಾನ್ಯ ತಪಾಸಣೆ ವೇಳೆ ತೊಂದರೆ ಅನುಭವಿಸುತ್ತಿದ್ದ ಪ್ರಯಾಣಿಕರಿಗೆ ಇದರಿಂದ ಅನುಕೂಲವಾಗಲಿದೆ. ಈ ಸೌಲಭ್ಯ ಪಡೆದುಕೊಳ್ಳುವ ಪ್ರಯಾಣಿಕರ ಕುರಿತು ಭದ್ರತಾ ಸಿಬ್ಬಂದಿಗಳಿಗೆ ಯಾವುದಾದರೂ ಅನುಮಾನವಿದ್ದರೆ ದಾಖಲೆಗಳನ್ನು ತೋರಿಸಲು ಮನವಿ ಮಾಡಲಾಗಿದೆ ಎಂದು ಸಿಐಎಸ್ಎಫ್ ಅಧಿಕಾರಿಗಳು ತಿಳಿಸಿದರು.

'ದೆಹಲಿ ಮೆಟ್ರೋ'ವನ್ನು ಪ್ರಯಾಣಿಕ ಸ್ನೇಹಿಯಾಗಿ ರೂಪಿಸುವ ಗುರಿಯಿದ್ದು, ಯೋಜನೆಯನ್ನು ಸರಿಯಾದ ರೀತಿಯಲ್ಲಿ ಅನುಷ್ಠಾನಗೊಳಿಸುವ ಮೂಲಕ ಅಗತ್ಯವಿರುವವರಿಗೆ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.