ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಮಹಾನಗರ ಪಾಲಿಕೆ ಫಲಿತಾಂಶ: ಅಧಿಕಾರದ ಗದ್ದುಗೆಯತ್ತ ಎಎಪಿ

Last Updated 7 ಡಿಸೆಂಬರ್ 2022, 7:32 IST
ಅಕ್ಷರ ಗಾತ್ರ

ನವದೆಹಲಿ:ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು ಆಡಳಿತಾರೂಢ ಎಎಪಿ ಪಕ್ಷ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ.

ದೆಹಲಿಯ ಆಡಳಿತಾರೂಢ ಎಎಪಿ ಪಕ್ಷ 132ಸ್ಥಾನಗಳಲ್ಲಿ, ಬಿಜೆಪಿ 103ಸ್ಥಾನಗಳಲ್ಲಿ, ಕಾಂಗ್ರೆಸ್‌ ಪಕ್ಷ ಕೇವಲ 11ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಇತರರು 4ಸ್ಥಾನಗಳಲ್ಲಿ ಮುಂದೆ ಇದ್ದಾರೆ

250 ವಾರ್ಡ್‌ಗಳಿಗೆ ಚುನಾವಣೆ ನಡೆದಿತ್ತು. ಮೇಯರ್‌ ಸ್ಥಾನ ಪಡೆಯಲು 126 ವಾರ್ಡ್‌ಗಳಲ್ಲಿ ಗೆಲುವು ಅಗತ್ಯವಿದೆ.

ಎಎಪಿಯು 154 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಲಿದ್ದು, ಬಿಜೆಪಿ 84 ಕ್ಷೇತ್ರಗಳಲ್ಲಷ್ಟೇ ಗೆಲುವು ಸಾಧಿಸಲಿದೆ. ಕಾಂಗ್ರೆಸ್‌ ಕೇವಲ ಆರು ವಾರ್ಡ್‌ಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗುತ್ತದೆ ಎಂದು ಮತದಾನೋತ್ತರ ಸಮೀಕ್ಷೆಗಳು ಹೇಳಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT