ನವದೆಹಲಿ: ಇಂದು ಮುಂಜಾನೆ ದೆಹಲಿಯ ಮುಸ್ತಫಾಬಾದ್ ಪ್ರದೇಶದಲ್ಲಿ ಕಟ್ಟಡವೊಂದು ಕುಸಿದು ಬಿದ್ದು, ನಾಲ್ವರು ಮೃತಪಟ್ಟು ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವ ಸಾಧ್ಯತೆಯಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಮತ್ತು ದೆಹಲಿ ಪೊಲೀಸರ ತಂಡಗಳು ಸ್ಥಳಕ್ಕೆ ತಲುಪಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

‘ಇಲ್ಲಿಯವರೆಗೆ 10 ಜನರನ್ನು ಅವಶೇಷಗಳಡಿಯಿಂದ ಹೊರತೆಗೆದಿದ್ದು, ಅವರಲ್ಲಿ ನಾಲ್ವರು ಮೃತಪಟ್ಟಿದ್ದಾರೆ’ ಎಂದು ಡಿಸಿಪಿ ಸಂದೀಪ್ ಲಂಬಾ ಮಾಹಿತಿ ನೀಡಿದ್ದಾರೆ.

‘ಸಹೋದರರಿಬ್ಬರು ತಮ್ಮ ಕುಟುಂಬದೊಂದಿಗೆ ಇಲ್ಲಿ ವಾಸಿಸುತ್ತಿದ್ದು, ಇಬ್ಬರಿಗೂ ತಲಾ ಮೂವರು ಮಕ್ಕಳಿದ್ದಾರೆ. ಅವರ್ಯಾರು ಇಲ್ಲಿ ಕಾಣಿಸುತ್ತಿಲ್ಲ’ ಎಂದು ಸ್ಥಳೀಯರೊಬ್ಬರು ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.