ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗ ಸಭೆ: ಕೇರಳ, ರಾಜಸ್ಥಾನ ಸಿಎಂ ಗೈರು

Published : 27 ಮೇ 2023, 6:13 IST
Last Updated : 27 ಮೇ 2023, 6:13 IST
ಫಾಲೋ ಮಾಡಿ
Comments

ನವದೆಹಲಿ: ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ನೀತಿ ಆಯೋಗ ಸಮಿತಿ ಸಭೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ಗೈರಾಗಿದ್ದಾರೆ.

ಸಿಎಂ ಗೆಹಲೋತ್‌ ಸಭೆಗೆ ಹಾಜರಾಗದಿರಲು ಆರೋಗ್ಯ ಕಾರಣಗಳನ್ನು ನೀಡಿದ್ದಾರೆ. ಆದರೆ, ಸಿಎಂ ವಿಜಯನ್ ಅವರು ಗೈರುಹಾಜರಿಗೆ ಯಾವುದೇ ನಿರ್ಧಿಷ್ಟ ಕಾರಣವನ್ನು ನೀಡಿಲ್ಲ.

ಇವರನ್ನು ಹೊರತುಪಡಿಸಿ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಪಂಜಾಬ್ ಸಿಎಂ ಭಗವಂತ್ ಮಾನ್, ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಬಿಹಾರ ಸಿಎಂ ನಿತೀಶ್ ಕುಮಾರ್ ಸಭೆಯಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ, ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್ ಮತ್ತು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ನೀತಿ ಆಯೋಗ ಸಮಿತಿ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದಾರೆ.

ದೆಹಲಿಯ ಪ್ರಗತಿ ಮೈದಾನದಲ್ಲಿರುವ ಹೊಸ ಕನ್ವೆನ್ಷನ್‌ ಸೆಂಟರ್‌ನಲ್ಲಿ ‘ವಿಕ್ಷಿತ್‌ ಭಾರತ್‌ @2047: ಟೀಮ್‌ ಇಂಡಿಯಾದ ಪಾತ್ರ’ ವಿಷಯದ ಕುರಿತು ನೀತಿ ಆಯೋಗದ ಎಂಟನೇ ಆಡಳಿತ ಮಂಡಳಿ ಸಭೆ ನಡೆಯಲಿದ್ದು, ಮೋದಿ ಅಧ್ಯಕ್ಷ‌ತೆ ವಹಿಸಲಿದ್ದಾರೆ.

2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯೊಂದಿಗೆ ಆರೋಗ್ಯ, ಕೌಶಲ್ಯ ಅಭಿವೃದ್ಧಿ, ಮಹಿಳಾ ಸಬಲೀಕರಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ಮೋದಿ ಚರ್ಚಿಸಲಿದ್ದಾರೆ.

ಸಭೆಯಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್‌ ಗವರ್ನರ್‌ಗಳು, ನೀತಿ ಆಯೋಗದ ಉಪಾಧ್ಯಕ್ಷರು ಹಾಗೂ ಸದಸ್ಯರು ಮತ್ತು ಕೇಂದ್ರ ಸಚಿವರು ಸೇರಿದಂತೆ ಇತರೆ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT