ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಗ್ರೆಸ್‌ ಪಕ್ಷದ 139ನೇ ಸಂಸ್ಥಾಪನಾ ದಿನ: ಲೋಕಸಭೆ ಚುನಾವಣಾ ಪ್ರಚಾರಕ್ಕೆ ಚಾಲನೆ

Published 28 ಡಿಸೆಂಬರ್ 2023, 6:13 IST
Last Updated 28 ಡಿಸೆಂಬರ್ 2023, 6:13 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್‌ ಪಕ್ಷದ 139ನೇ ಸಂಸ್ಥಾಪನಾ ದಿನದ ಪ್ರಯುಕ್ತ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಧ್ವಜಾರೋಹಣ ನೆರವೇರಿಸಿದರು.

ಸಂಸದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇಂದು ನಾಗ್ಪುರದಲ್ಲಿ ನಡೆಯುವ 'ನಾವು ಸಿದ್ಧರಾಗಿದ್ದೇವೆ' ಬೃಹತ್‌ ರ‍್ಯಾಲಿಯೊಂದಿಗೆ ಮುಂಬರುವ ಲೋಕಸಭೆ ಚುನಾವಣೆಗೆ ಪ್ರಚಾರ ಆರಂಭಿಸುವುದಾಗಿ ಪಕ್ಷ ಘೋಷಿಸಿದೆ.

ಖರ್ಗೆ ಅವರು ಧ್ವಜಾರೋಹಣ ನೆರವೇರಿಸಿದ ವಿಡಿಯೊವನ್ನು ಎಕ್ಸ್‌ (ಟ್ವಿಟರ್‌)ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್‌, 'ಇದು ದೇಶಕ್ಕಾಗಿ ನಮ್ಮ ನಿಷ್ಠೆ ಮತ್ತು ಅರ್ಪಣಾ ಮನೋಭಾವದ ಸಾಂಕೇತಿಕ ದಿನವಾಗಿದೆ. ಸತ್ಯ, ಅಹಿಂಸೆ, ಪರಸ್ಪರ ಗೌರವ ಮತ್ತು ಭ್ರಾತೃತ್ವಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್' ಎಂದು ಬರೆದುಕೊಂಡಿದೆ.

'ಸಂಸ್ಥಾಪನಾ ದಿನದ ಅಂಗವಾಗಿ ನಾವು ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕು. ಕಾಂಗ್ರೆಸ್ ಪಕ್ಷವು ಎಂದಿಗೂ ತನ್ನ ಸಿದ್ಧಾಂತಗಳಿಂದ ದೂರ ಸರಿಯುವುದಿಲ್ಲ ಎಂಬ ಸಂದೇಶವನ್ನು ರಾಷ್ಟ್ರದಾದ್ಯಂತ ರವಾನಿಸಬೇಕು. 2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಾಗಪುರದಿಂದ ಆ ಸಂದೇಶ ನೀಡಲು ಬಯಸುತ್ತೇವೆ' ಎಂದು ಖರ್ಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT