ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ ಸ್ಫೋಟ ಬೆನ್ನಲ್ಲೇ ದೆಹಲಿಯಲ್ಲಿ ಹೈ ಅಲರ್ಟ್: ಹಲವೆಡೆ ಬಿಗಿ ಪೊಲೀಸ್ ಭದ್ರತೆ

Published 29 ಅಕ್ಟೋಬರ್ 2023, 10:45 IST
Last Updated 29 ಅಕ್ಟೋಬರ್ 2023, 10:45 IST
ಅಕ್ಷರ ಗಾತ್ರ

ನವದೆಹಲಿ: ಕೇರಳದ ಎರ್ನಾಕುಲಂ ಜಿಲ್ಲೆಯ ಕ್ರಿಶ್ಚಿಯನ್ ಸಮಾವೇಶ ಕೇಂದ್ರದಲ್ಲಿ (ಕನ್ವೆನ್ಷನ್‌ ಸೆಂಟರ್) ಇಂದು (ಭಾನುವಾರ) ಬೆಳಿಗ್ಗೆ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಒಬ್ಬರು ಸಾವಿಗೀಡಾಗಿದ್ದು, 36 ಮಂದಿ ಗಾಯಗೊಂಡಿದ್ದಾರೆ.

ಈ ಘಟನೆ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಮುಖ ಮಾರುಕಟ್ಟೆಗಳು, ಚರ್ಚ್‌ಗಳು, ಮೆಟ್ರೊ ನಿಲ್ದಾಣ, ಬಸ್ ನಿಲ್ದಾಣ, ರೈಲು ನಿಲ್ದಾಣಗಳು ಸೇರಿದಂತೆ ಇತರ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉತ್ತರ ಪ್ರದೇಶ, ಹರಿಯಾಣ ಮತ್ತು ದೆಹಲಿಯ ಗಡಿ ಪ್ರದೇಶಗಳಲ್ಲಿ ಹೆಚ್ಚಿನ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ತಪಾಸಣೆ ನಡೆಸಲು ಸೂಚನೆ ನೀಡಲಾಗಿದೆ. ಸಿವಿಲ್ ಡ್ರೆಸ್ ಮತ್ತು ಪಿಸಿಆರ್‌ನಲ್ಲಿರುವ ಪೊಲೀಸರು ಜಾಗರೂಕರಾಗಿರಲು ತಿಳಿಸಲಾಗಿದೆ. ಜತೆಗೆ, ಅವರಿಗೆ ಬರುವ ಯಾವುದೇ ಮಾಹಿತಿಯನ್ನು ನಿರ್ಲಕ್ಷಿಸದಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ದೆಹಲಿ ಪೊಲೀಸರ ವಿಶೇಷ ಘಟಕವು ಕೇಂದ್ರ ತನಿಖಾ ಸಂಸ್ಥೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT