ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಹಳಿ ತಪ್ಪಿದ ರೈಲು: ಯಾವುದೇ ಅನಾಹುತವಿಲ್ಲ

Published 3 ಸೆಪ್ಟೆಂಬರ್ 2023, 6:41 IST
Last Updated 3 ಸೆಪ್ಟೆಂಬರ್ 2023, 6:41 IST
ಅಕ್ಷರ ಗಾತ್ರ

ಬೆಂಗಳೂರು: ದೆಹಲಿಯಲ್ಲಿ ಸ್ಥಳೀಯ ಪ್ರಯಾಣಿಕರ ರೈಲು ಭಾನುವಾರ ಬೆಳಗ್ಗೆ ಹಳಿ ತಪ್ಪಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ರೈಲು ಹಳಿ ತಪ್ಪಿದ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ರೈಲು ಪಲ್ವಾಲ್‌ನಿಂದ ನವದೆಹಲಿಯ ರೈಲು ನಿಲ್ದಾಣಕ್ಕೆ ಬರುತ್ತಿತ್ತು. ಈ ವೇಳೆ ಪ್ರಗತಿ ಮೈದಾನದ ಸಮೀಪ ಹಳಿ ತಪ್ಪಿದೆ. ಘಟನೆಯಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಆದರೆ ರೈಲಿನ ಒಂದು ಬೋಗಿಗೆ ಹಾನಿಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಒಡಿಶಾದ ಬಹುನಾಗಾದಲ್ಲಿ ಜೂನ್ 2ರಂದು ಸಂಭವಿಸಿದ ರೈಲು ಅಪಘಾತದಲ್ಲಿ 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT