ನವದೆಹಲಿ: ‘ಇಲ್ಲಿನ ಜಿಬಿಟಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ 32 ವರ್ಷದ ರಿಯಾಜುದ್ದೀನ್ ಎಂಬ ರೋಗಿಯ ಮೇಲೆ 18 ವರ್ಷದ ಯುವಕನೊಬ್ಬ ಭಾನುವಾರ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ಜೂನ್ 23ರಂದು ರಿಯಾಜುದ್ದೀನ್ ಆಸ್ಪತ್ರೆಗೆ ದಾಖಲಾಗಿದ್ದರು. ಹೊಟ್ಟೆಗೆ ಸಂಬಂಧಿಸಿದ ರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಸಂಜೆ 4ರ ಸುಮಾರಿಗೆ ಘಟನೆ ನಡೆದಿದೆ. ಈ ಬಗ್ಗೆ ಠಾಣೆಗೆ ಕರೆ ಬಂದಿತ್ತು’ ಎಂದರು.

‘ಘಟನೆ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಗುಂಡು ಹಾರಿಸಿದ ಯುವಕನಿಗಾಗಿ ಹುಡುಕಾಟ ನಡೆಯುತ್ತಿದೆ. ವೈಯಕ್ತಿಕ ಕಾರಣಕ್ಕಾಗಿ ಹತ್ಯೆ ನಡೆದಿರಬಹುದು ಎಂದು ಮೇಲ್ನೋಟಕ್ಕೆ ಕಾಣಿಸುತ್ತಿದೆ’ ಎಂದು ಪೊಲೀಸರು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.