ನವದೆಹಲಿ: ‘ಕೋವಿಡ್ ಲಸಿಕೆ ಅಭಿಯಾನಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಟೀಕಿಸಿ ಪೋಸ್ಟರ್ಗಳನ್ನು ಅಂಟಿಸಿದ್ದ ಆರೋಪದಡಿ ದೆಹಲಿ ಪೊಲೀಸರು 15 ಮಂದಿಯನ್ನು ಬಂಧಿಸಿದ್ದಾರೆ. ಜತೆಗೆ 17 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ’ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು.

‘ಮೋದಿಜೀ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಗಳಿಗೆ ಏಕೆ ಕಳುಹಿಸಿದ್ದೀರಾ?’ ಎಂದು ಬರೆದಿರುವ ಪೋಸ್ಟರ್ಗಳನ್ನು ದೆಹಲಿಯ ಹಲವೆಡೆ ಅಂಟಿಸಲಾಗಿತ್ತು. ಈ ಬಗ್ಗೆ ಹಿರಿಯ ಅಧಿಕಾರಿಗಳು ನಮ್ಮೊಂದಿಗೆ ಗುರುವಾರ ಮಾಹಿತಿ ಹಂಚಿಕೊಂಡರು. ಈ ಸಂಬಂಧ ಹೆಚ್ಚಿನ ದೂರುಗಳು ಬಂದರೆ, ಇನ್ನಷ್ಟು ಎಫ್ಐಆರ್ಗಳು ದಾಖಲಾಗುವ ಸಾಧ್ಯತೆಗಳಿವೆ. ಈಗಾಗಲೇ ತನಿಖೆ ಆರಂಭಿಸಿದ್ದೇವೆ’ ಎಂದು ಅವರು ಹೇಳಿದರು.

‘ನಗರದ ಹಲವು ಭಾಗಗಳಿಂದ 15 ಮಂದಿಯನ್ನು ಬಂಧಿಸಲಾಗಿದ್ದು, 17 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈಶಾನ್ಯ ದೆಹಲಿಯಲ್ಲಿ ಬಂಧಿಸಲ್ಪಟ್ಟ ಒಬ್ಬ ಆರೋಪಿಯು ತನಗೆ ಈ ಕೆಲಸ ಮಾಡಲು ₹500 ನೀಡಿದ್ದರು ಎಂದು ವಿಚಾರಣೆ ವೇಳೆ ಹೇಳಿದ್ದಾನೆ. ಈ ಪ್ರಕರಣ ಸಂಬಂಧ ಇನ್ನೊಬ್ಬ ವ್ಯಕ್ತಿಗಾಗಿ ಹುಡುಕಾಟ ನಡೆಸಲಾಗುತ್ತಿದೆ’ ಎಂದು ಅವರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.