ನವದೆಹಲಿ: ಗುಜರಾತ್, ರಾಜಸ್ಥಾನ ಮತ್ತು ದೆಹಲಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಶು ಕಳ್ಳಸಾಗಣೆ ಜಾಲವನ್ನು ದೆಹಲಿ ಪೊಲೀಸರು ಭೇದಿಸಿದ್ದು, ಮೂವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಯಶ್ಮಿನ್ (30), ಅಂಜಲಿ (36) ಮತ್ತು ಜಿತೇಂದರ್ (47) ಬಂಧಿತರು.

ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯಾಚರಣೆ ನಡೆಸಿದ ದೆಹಲಿ ಪೊಲೀಸರ ತಂಡ, ಏಪ್ರಿಲ್ 8ರಂದು ಉತ್ತಮ್ ನಗರ ಪ್ರದೇಶದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಗಂಡು ಶಿಶುವನ್ನು ರಕ್ಷಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಗುಜರಾತ್ ಮತ್ತು ರಾಜಸ್ಥಾನದ ಬಡ ಕುಟುಂಬಗಳನ್ನು ಗುರಿಯಾಗಿಸಿಕೊಂಡಿದ್ದ ಈ ಗ್ಯಾಂಗ್, ಮಕ್ಕಳನ್ನು ಕದ್ದು ದೆಹಲಿಯ ಮಕ್ಕಳಿಲ್ಲದ ಶ್ರೀಮಂತ ದಂಪತಿಗೆ ಮಾರಾಟ ಮಾಡುತ್ತಿದ್ದರು. ಪ್ರತಿ ಮಗುವಿಗೆ ₹5 ರಿಂದ ₹10 ಲಕ್ಷದವರೆಗೆ ಹಣ ಪಡೆಯುತ್ತಿದ್ದರು ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಗ್ಯಾಂಗ್ನ ಇತರ ಸದಸ್ಯರನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈವರೆಗೆ 35ಕ್ಕೂ ಹೆಚ್ಚು ಶಿಶುಗಳನ್ನು ಈ ಗ್ಯಾಂಗ್ ಕಳ್ಳಸಾಗಣೆ ಮಾಡಿದೆ ಎಂದು ಉಪ ಪೊಲೀಸ್ ಆಯುಕ್ತ ಅಂಕಿತ್ ಸಿಂಗ್ ಹೇಳಿದ್ದಾರೆ.

ರಕ್ಷಿಸಲಾದ ಶಿಶುವನ್ನು ಆರೈಕೆಯಲ್ಲಿ ಇರಿಸಲಾಗಿದ್ದು, ಅದರ ಪೋಷಕರನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.