ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದ ಪ್ರಕರಣದ ಬೆನ್ನಲ್ಲೇ ಅವರಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಅವರ ಭದ್ರತೆಗೆ 40 ಸಿಬ್ಬಂದಿಯನ್ನು ಶಾಶ್ವತವಾಗಿ ನಿಯೋಜಿಸಲಾಗಿದೆ ಮತ್ತು ಅವರ ಯಾವುದೇ ಕಾರ್ಯಕ್ರಮಗಳಿಗೆ ಭೇಟಿ ನೀಡುವ ಮೊದಲು ಸಂದರ್ಶಕರ ತೀವ್ರ ತಪಾಸಣೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಮುಖ್ಯಮಂತ್ರಿಗೆ 'ಝಡ್' ಶ್ರೇಣಿಯ ವಿಐಪಿ ಭದ್ರತೆ ಒದಗಿಸುವಂತೆ ಕೇಂದ್ರ ಗೃಹ ಸಚಿವಾಲಯ ಸಿಆರ್ಪಿಎಫ್ಗೆ ನಿರ್ದೇಶನ ನೀಡಿತ್ತು. ಆದರೆ ಈಗ ಅದನ್ನು ಹಿಂಪಡೆಯಲಾಗಿದೆ. ಬದಲಾಗಿ, ದೆಹಲಿ ಪೊಲೀಸರು ಅವರ ರಕ್ಷಣೆ ಜವಾಬ್ದಾರಿ ವಹಿಸಿಕೊಂಡಿದ್ದು, ಹೆಚ್ಚುವರಿ ನಿಯೋಜನೆಯೊಂದಿಗೆ Z+ ಭದ್ರತೆಯನ್ನು ಒದಗಿಸಿದ್ದಾರೆ.
.ಹಲ್ಲೆ ಪ್ರಕರಣ: ದೆಹಲಿ ಸಿಎಂ ರೇಖಾಗೆ ನೀಡಿದ್ದ CRPF ಭದ್ರತೆ ವಾಪಸ್ ಪಡೆದ ಕೇಂದ್ರ.
ದೆಹಲಿ ಮುಖ್ಯಮಂತ್ರಿಗೆ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಅವರು ಭಾಗಿಯಾಗುವ ಎಲ್ಲಾ ಕಾರ್ಯಕ್ರಮಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಗಸ್ಟ್ 20 ರಂದು ದೆಹಲಿಯ ಸಿವಿಲ್ ಲೈನ್ಸ್ನಲ್ಲಿರುವ ಅಧಿಕೃತ ನಿವಾಸದಲ್ಲಿ ಸಾಪ್ತಾಹಿಕ ‘ಜನ ಸುನ್ವಾಯೀ’ ಕಾರ್ಯಕ್ರಮದ ವೇಳೆ ರೇಖಾ ಗುಪ್ತಾ ಅವರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ನ ರಾಜ್ಕೋಟ್ ನಿವಾಸಿ ಸಕರಿಯಾ ರಾಜೇಶ್ಭಾಯಿ ಖಿಮ್ಜಿಭಾಯಿ (41) ಎಂಬಾತನನ್ನು ಬಂಧಿಸಲಾಗಿತ್ತು.

ಇದು ರೇಖಾ ಗುಪ್ತಾ ಅವರ ಹತ್ಯೆಗೆ ನಡೆಸಿದ 'ಯೋಜಿತ ಸಂಚಿನ ಭಾಗ' ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ಹೇಳಿತ್ತು.
.Rekha Gupta: ದೆಹಲಿ ಸಿಎಂ ರೇಖಾ ಗುಪ್ತಾಗೆ ವ್ಯಕ್ತಿಯಿಂದ ಕಪಾಳಮೋಕ್ಷ.
ಪ್ರತಿಯೊಬ್ಬ ಸಂದರ್ಶಕ ಆವರಣಕ್ಕೆ ಪ್ರವೇಶಿಸುವ ಮೊದಲು ತೀವ್ರ ತಪಾಸಣೆ ಮಾಡಲಾಗುತ್ತದೆ. ಯಾವುದೇ ಲೋಪವಾಗದಂತೆ ನಾವು 2 ಹಂತದ ಭದ್ರತಾ ವ್ಯವಸ್ಥೆ ಕಲ್ಪಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯಮಂತ್ರಿಗೆ ಈಗ 2 ಹಂತದ ಭದ್ರತಾ ವ್ಯವಸ್ಥೆಯಿದ್ದು, ಇದನ್ನು ಸಂಪೂರ್ಣವಾಗಿ ದೆಹಲಿ ಪೊಲೀಸರು ನಿರ್ವಹಿಸುತ್ತಾರೆ ಎಂದೂ ಅವರು ಹೇಳಿದ್ದಾರೆ.
.ದೆಹಲಿ ಸಿಎಂ ರೇಖಾ ಗುಪ್ತಾಗೆ 'ಝಡ್' ಶ್ರೇಣಿಯ ವಿಐಪಿ ಭದ್ರತೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.