ನವದೆಹಲಿ: ದೆಹಲಿ ಪೊಲೀಸರ ವಿಶೇಷ ಘಟಕ, ಜಾರ್ಖಂಡ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ರಾಂಚಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಶಂಕಿತ ಐಎಸ್ಐಎಸ್ ಉಗ್ರರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ ಪೊಲೀಸ್ ವಿಶೇಷ ಘಟಕವು ದಾಖಲಿಸಿದ ಪ್ರಕರಣದಲ್ಲಿ ಬೊಕಾರೊ ಮೂಲದ ಆಶರ್ ಡ್ಯಾನಿಶ್ ಎಂದು ಗುರುತಿಸಲಾದ ಪ್ರಮುಖ ಆರೋಪಿಯನ್ನು ರಾಂಚಿಯಲ್ಲಿ ಬಂಧಿಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದೆಹಲಿಯಲ್ಲಿ ತನಿಖಾ ತಂಡಗಳು ಏಕಕಾಲದಲ್ಲಿ ನಡೆಸಿದ ಸಂಘಟಿತ ಕಾರ್ಯಾಚರಣೆ ವೇಳೆ ಮತ್ತೊಬ್ಬ ಶಂಕಿತ ಉಗ್ರ ಅಫ್ತಾಬ್ನನ್ನು ಬಂಧಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಬಂಧಿತರು ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದರು. ಜತೆಗೆ, ಭಾರತದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಸಂಚು ರೂಪಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.