ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟಿಸುವುದಾಗಿ ದೆಹಲಿ ಪೊಲೀಸರಿಗೆ ಬೆದರಿಕೆ ಕರೆ

Published 26 ಡಿಸೆಂಬರ್ 2023, 14:29 IST
Last Updated 26 ಡಿಸೆಂಬರ್ 2023, 14:29 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ಸಂಭವಿಸಲಿದೆ ಎಂದು ಅಪರಿಚಿತ ವ್ಯಕ್ತಿಯೊಬ್ಬರು ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ.

ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ‘ಪಿಟಿಐ’ ವರದಿ ಮಾಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಇದಕ್ಕೂ ಮುನ್ನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಿಸರ್ವ್ ಬ್ಯಾಂಕ್‌ನ ಗವರ್ನರ್ ಶಕ್ತಿಕಾಂತ ದಾಸ್ ರಾಜೀನಾಮೆಗೆ ಒತ್ತಾಯಿಸಿ ಮೂರು ಸ್ಥಳಗಳಲ್ಲಿ 11 ಬಾಂಬ್‌ಗಳನ್ನು ಇಡುವುದಾಗಿ ಬೆದರಿಕೆಯ ಇ-ಮೇಲ್ ಅನ್ನು ಭಾರತೀಯ ರಿಸರ್ವ್ ಬ್ಯಾಂಕ್‌ಗೆ (ಆರ್‌ಬಿಐ) ಕಳುಹಿಸಲಾಗಿದೆ.

ಇ –ಮೇಲ್ ಕಳುಹಿಸಿದವರನ್ನು ಪತ್ತೆಹಚ್ಚಲು ಮುಂಬೈ ಪೊಲೀಸರು ಮತ್ತು ಭದ್ರತಾ ಪಡೆಗಳು ತಕ್ಷಣವೇ ತನಿಖೆ ಆರಂಭಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT