ನವದೆಹಲಿ: ಗಣರಾಜ್ಯೋತ್ಸವ ದಿನದಂದು ನಡೆದ ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ 200 ಮಂದಿಯ ಭಾವಚಿತ್ರಗಳನ್ನು ದೆಹಲಿ ಪೊಲೀಸರು ಶುಕ್ರವಾರ ಬಿಡುಗಡೆ ಮಾಡಿದ್ದಾರೆ.

ದೆಹಲಿಯಲ್ಲಿ ಜನವರಿ 26ರಂದು ನಡೆದ ಟ್ರ್ಯಾಕ್ಟರ್ ರ‍್ಯಾಲಿಗೆ ಸಂಬಂಧಿಸಿದಂತೆ ಎಲ್ಲ ವಿಡಿಯೊಗಳು ಮತ್ತು ಚಿತ್ರಗಳನ್ನು ಪರಿಶೀಲಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಭಾವಚಿತ್ರದಲ್ಲಿ ಇರುವವರನ್ನು ಗುರುತಿಸುವ ಕಾರ್ಯ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸಿದ ಟ್ರ್ಯಾಕ್ಟರ್ ಪರೇಡ್ ಸಂದರ್ಭದಲ್ಲಿ ರೈತರು ಮತ್ತು ಪೊಲೀಸರ ನಡುವೆ ಸಂಘರ್ಷ ನಡೆದಿತ್ತು. ಹಲವರು ಕೆಂಪುಕೋಟೆ ಪ್ರವೇಶಿಸಿ ಧಾರ್ಮಿಕ ಧ್ವಜ ಹಾರಿಸಿದ್ದು ವಿವಾದಕ್ಕೆ ಕಾರಣವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.