ನವದೆಹಲಿ: ಭಾರೀ ವಿವಾದಕ್ಕೆ ಕಾರಣವಾಗಿರುವ ಸ್ವೀಡನ್ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಮತ್ತು ಇತರರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ರೈತರ ಹೋರಾಟಕ್ಕೆ ಬೆಂಬಲ ಸೂಚಿಸುವ ರೂಪುರೇಷೆ ಇದೆ ಎನ್ನಲಾದ "ಟೂಲ್‌ಕಿಟ್" ನ ಸೃಷ್ಟಿಕರ್ತರಿಗೆ ಸಂಬಂಧಿಸಿದ ಇಮೇಲ್ ಐಡಿಗಳು, ಯುಆರ್‌ಎಲ್‌ಗಳು ಮತ್ತು ಕೆಲವು ಸಾಮಾಜಿಕ ಮಾಧ್ಯಮ ಖಾತೆಗಳ ಬಗ್ಗೆ ಮಾಹಿತಿ ನೀಡುವಂತೆ ದೆಹಲಿ ಪೊಲೀಸರು, ಗೂಗಲ್ ಮತ್ತಿತರ ಸಾಮಾಜಿಕ ಮಾಧ್ಯಮ ಸಂಸ್ಥೆಗಳಿಗೆ ಮನವಿ ಮಾಡಿದ್ದಾರೆ.

"ಭಾರತ ಸರ್ಕಾರದ ವಿರುದ್ಧ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ಯುದ್ಧ" ನಡೆಸಲು "ಟೂಲ್ ಕಿಟ್" ಸಿದ್ಧಪಡಿಸಿರುವ "ಖಲಿಸ್ತಾನ್ ಪರ" ಸೃಷ್ಟಿಕರ್ತರ ವಿರುದ್ಧ ದೆಹಲಿ ಪೊಲೀಸ್ ಸೈಬರ್ ಸೆಲ್ ಘಟಕ ಗುರುವಾರ ಎಫ್ಐಆರ್ ದಾಖಲಿಸಿತ್ತು.

ಈ ವಿವಾದಿತ ಸೋಶಿಯಲ್ ಮೀಡಿಯಾ ಖಾತೆಗಳನ್ನು ರಚಿಸಿದ ಮತ್ತು ಟೂಲ್ ಕಿಟ್ ಸೇರಿದಂತೆ ಈ ದಾಖಲೆಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ ಜನರ ಬಗ್ಗೆ ಮಾಹಿತಿ ಕೋರಿ ಗೂಗಲ್ ಮತ್ತು ಇತರ ಸಂಸ್ಥೆಗಳಿಗೆ ಪತ್ರ ಬರೆಯಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ಸೈಬರ್ ವಿಭಾಗ) ಅನೀಶ್ ರಾಯ್ ಹೇಳಿದ್ದಾರೆ.

ಇದನ್ನೂ ಓದಿ: ‘ಗ್ರೇಟಾ’ ಹಂಚಿಕೊಂಡ ಟೂಲ್ ಕಿಟ್ನಲ್ಲೇನಿದೆ? ವಿವಾದವಾಗಿದ್ದೇಕೆ? ಇಲ್ಲಿದೆ ಮಾಹಿತಿ

"ಟೂಲ್ ಕಿಟ್" ನಲ್ಲಿ ಉಲ್ಲೇಖಿಸಲಾದ ಇಮೇಲ್ ಐಡಿಗಳು, ಡೊಮೇನ್ URL ಗಳು ಮತ್ತು ಕೆಲವು ಸಾಮಾಜಿಕ ಮಾಧ್ಯಮ ಖಾತೆಗಳ ಬಗ್ಗೆ ವಿವರಗಳನ್ನು ಕೋರಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ. ಟೂಲ್ ಕಿಟ್ ಡಾಕ್ಯುಮೆಂಟ್ ಅನ್ನು ಗೂಗಲ್ ಡಾಕ್ ಮೂಲಕ ಅಪ್‌ಲೋಡ್ ಮಾಡಲಾಗಿದೆ. ನಂತರ ಅದನ್ನು ಟ್ವಿಟರ್‌ನಲ್ಲಿ ಹಂಚಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸದ್ಯ, ನಾವು ಸಂಬಂಧಪಟ್ಟ ಸಂಸ್ಥೆಗಳಿಂದ ವಿವರಗಳಿಗಾಗಿ ಕಾಯುತ್ತಿದ್ದೇವೆ. ಮಾಹಿತಿ ಸಿಕ್ಕ ಬಳಿಕ ಅದರ ಆಧಾರದ ಮೇಲೆ ತನಿಖೆ ಮುಂದುವರೆಯಲಿದೆ ಎಂದು ಪೊಲೀಸರು ಹೇಳಿದ್ದಾರೆ.

ಮೂಲ ದಾಖಲೆಗಳು ಟೂಲ್ ಕಿಟ್ ಸೃಷ್ಟಿಕರ್ತರು ಮತ್ತು ಅವುಗಳನ್ನು ಹಂಚಿಕೊಂಡವರನ್ನು ಪತ್ತೆಹಚ್ಚಲು ನೆರವಾಗುತ್ತವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಟೂಲ್ ಕಿಟ್ ಡಾಕ್ಯುಮೆಂಟ್ ಅನ್ನು ಕೆಲವು ಜನರು ರಚಿಸಿದ್ದಾರೆ, ಕೆಲವರು ಎಡಿಟ್ ಮಾಡಿದ್ದರೆ, ಮತ್ತೆ ಕೆಲವರು ಹಂಚಿದ್ದಾರೆ. ಅವರು ಯಾರೆಂಬ ಪ್ರಶ್ನೆ ನಮ್ಮ ಮುಂದಿದೆ. ಇದರಲ್ಲಿ "ಪಿತೂರಿಯ ಅಂಶ" ಇರುವುದರಿಂದ ಅವರನ್ನು ಗುರುತಿಸುವುದು ಮುಖ್ಯವಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.