ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಜನವರಿ 7ರಿಂದ 25ರ ನಡುವೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಬರೋಬ್ಬರಿ 718 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಜನವರಿ 7ರಂದು ದೆಹಲಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿತ್ತು.

‘ಚುನಾವಣೆಗೂ ಮುನ್ನ ಗಡಿ ತಪಸಣಾ ಕೇಂದ್ರಗಳಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಶಸ್ತ್ರಾಸ್ತ್ರಗಳು, ಮದ್ಯ ಮತ್ತು ಮಾದಕ ವಸ್ತುಗಳ ಕಳ್ಳಸಾಗಣೆ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ ಪೊಲೀಸರು 718 ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಿದ್ದಾರೆ. 348 ಅಕ್ರಮ ಶಸ್ತ್ರಾಸ್ತ್ರಗಳು ಹಾಗೂ 439 ಕಾರ್ಟ್ರಿಜ್ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

1.7 ಲಕ್ಷಕ್ಕೂ ಅಧಿಕ ಮೌಲ್ಯದ 57,504 ಲೀಟರ್ ಮದ್ಯ, 72 ಕೋಟಿಗೂ ಅಧಿಕ ಮಾಲ್ಯದ 155.08 ಕೆ.ಜಿ ಡ್ರಗ್ಸ್ ಮತ್ತು 1,200ಕ್ಕೂ ಹೆಚ್ಚು ನಿಷೇಧಿತ ಚುಚ್ಚುಮದ್ದುಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಕಾನೂನು ಜಾರಿ ಸಂಸ್ಥೆಗಳು 6.19 ಕೋಟಿ ನಗದು ಮತ್ತು 37.39 ಕೆ.ಜಿ ಬೆಳ್ಳಿಯನ್ನು ವಶಕ್ಕೆ ಪಡೆದಿವೆ ಎಂದು ತಿಳಿಸಿದೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆ.5ರಂದು ಮತದಾನ ನಡೆಯಲಿದ್ದು, ಫೆ.8ರಂದು ಮತ ಎಣಿಕೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.