ಕೇಂದ್ರ, ದಕ್ಷಿಣ, ನೈರುತ್ಯ ಹಾಗೂ ಪೂರ್ವ ದೆಹಲಿಯಲ್ಲಿ ಮಳೆ ಸುರಿದಿದೆ. ಕನಿಷ್ಠ ತಾಪಮಾನ 24.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ದೆಹಲಿಯ ವಾಯುಗುಣಮಟ್ಟ ಸೂಚ್ಯಂಕ ಸಮಾಧಾನಕರವಾಗಿದ್ದು, ಬೆಳಿಗ್ಗೆ 9 ಗಂಟೆಗೆ 53ರಷ್ಟಿತ್ತು ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ದತ್ತಾಂಶದಿಂದ ಗೊತ್ತಾಗಿದೆ.
ವಾಯು ಗುಣಮಟ್ಟ ಮಾಪನ ಸೂಚ್ಯಂಕದ ಅನುಸಾರ, 0 ಮತ್ತು 50 ರ ನಡುವಿನ ಎಕ್ಯೂಐ ಅನ್ನು ‘ಉತ್ತಮ’, 51 ಮತ್ತು 100 ‘ತೃಪ್ತಿದಾಯಕ’, 101 ಮತ್ತು 200 ‘ಮಧ್ಯಮ’, 201 ಮತ್ತು 300 ‘ಕಳಪೆ’, 301 ಮತ್ತು 400 ‘ಅತಿ ಕಳಪೆ’, ಮತ್ತು 401 ಮತ್ತು 500 ‘ತೀವ್ರ’ ಎಂದು ಪರಿಗಣಿಸಲಾಗುತ್ತದೆ.