ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ್ದ ಕಾರು ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ನವೆಂಬರ್ 10, ಸೋಮವಾರ ಸಂಜೆ ಕೆಂಪು ಕೋಟೆ ಮೆಟ್ರೊ ನಿಲ್ದಾಣದ ಸಮೀಪದ ಟ್ರಾಫಿಕ್ ಸಿಗ್ನಲ್ನಲ್ಲಿ ಕಾರು ಸ್ಫೋಟ ಸಂಭವಿಸಿತ್ತು. ಈ ಕಾರು ಸ್ಫೋಟದಲ್ಲಿ ಗಾಯಗೊಂಡು ಎಲ್ಎನ್ಜೆಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಲಾಲ್ ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟದಲ್ಲಿ ಬಿಲಾಲ್ ಎಂಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದರು. ಇಂದು ಬೆಳಿಗ್ಗೆ ಅವರ ಸಾವಿನ ಬಗ್ಗೆ ಆಸ್ಪತ್ರೆಯಿಂದ ಮಾಹಿತಿ ದೊರಕಿದೆ. ಮರಣೋತ್ತರ ಪರೀಕ್ಷೆಯನ್ನು ಇಂದು ಮಧ್ಯಾಹ್ನ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸ್ಫೋಟದಲ್ಲಿ ಗಾಯಗೊಂಡವರಿಗೆ ಎಲ್ಎನ್ಜೆಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ನಡೆದ ಕಾರು ಸ್ಫೋಟವನ್ನು 'ಭಯೋತ್ಪಾದಕ ಕೃತ್ಯ' ಎಂದು ಕೇಂದ್ರ ಸರ್ಕಾರ ಹೇಳಿದೆ. ಅಲ್ಲದೆ ಎಲ್ಲ ಆಯಾಮಗಳಿಂದಲೂ ಸಮಗ್ರ ತನಿಖೆ ನಡೆಸಲಾಗುತ್ತಿದೆ.
.ಆಳ ಅಗಲ | ಭಯೋತ್ಪಾದನೆಯ 'ಹೊಸ' ಮುಖ: 'ವೈಟ್ ಕಾಲರ್' ಉಗ್ರರು.Delhi Blast: ಬಾಬರಿ ಮಸೀದಿ ಧ್ವಂಸ ದಿನವಾದ ಡಿ. 6ರಂದು ಪ್ರಬಲ ಸ್ಫೋಟದ ಪಿತೂರಿ.Delhi Blast: ಜನವರಿಯಲ್ಲೇ ಸಂಚು ಶುರು; ಕೆಂಪುಕೋಟೆ ಬಳಿ ಹಲವು ಬಾರಿ ಸಂಚಾರ.Delhi Blast| ಕಾರು ಚಲಾಯಿಸುತ್ತಿದ್ದದ್ದು ಡಾ.ಉಮರ್ ನಬಿ: DNA ಪರೀಕ್ಷೆಯಲ್ಲಿ ದೃಢ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.