ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ವೈರಸ್‌ನ ಹೊಸ ರೂಪಾಂತರ ಓಮೈಕ್ರಾನ್‌ನ ನಾಲ್ಕು ಪ್ರಕರಣಗಳು ಮಂಗಳವಾರ ದೃಢಪಟ್ಟಿವೆ. ಇದರೊಂದಿಗೆ ದೆಹಲಿಯಲ್ಲಿ ಓಮೈಕ್ರಾನ್ ಪ್ರಕರಣಗಳ ಸಂಖ್ಯೆ 6ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಿಳಿಸಿದ್ದಾರೆ.

ಸೋಂಕಿತರಿಗೆ ಲೋಕನಾಯಕ ಜಯಪ್ರಕಾಶ್ ನಾರಾಯಣ್ (ಎಲ್‌ಎನ್‌ಜೆಪಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆರು ಮಂದಿಯ ಪೈಕಿ ರಾಂಚಿಯ 37 ವರ್ಷದ ವ್ಯಕ್ತಿಯಲ್ಲಿ ಮೊದಲು ಓಮೈಕ್ರಾನ್ ಪತ್ತೆಯಾಗಿತ್ತು. ಅವರೀಗ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದ ಐವರಲ್ಲಿ ಸೋಂಕಿನ ಸೌಮ್ಯ ಲಕ್ಷಣಗಳಿವೆ ಎಂದು ಜೈನ್ ಮಾಹಿತಿ ನೀಡಿದ್ದಾರೆ.

ಓದಿ:ಬ್ರಿಟನ್ನಲ್ಲಿ ಓಮೈಕ್ರಾನ್: ಏಪ್ರಿಲ್ ಅಂತ್ಯಕ್ಕೆ 75 ಸಾವಿರ ಜನರ ಸಾವು ಸಾಧ್ಯತೆ

ಈವರೆಗೆ ವಿದೇಶಗಳಿಂದ ವಾಪಸಾದ 74 ಮಂದಿಯನ್ನು ಎಲ್‌ಎನ್‌ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈವರೆಗೆ 36 ಮಂದಿಯನ್ನು ಬಿಡುಗಡೆ ಮಾಡಲಾಗಿದೆ. ಉಳಿದ 38 ಮಂದಿಯ ಪೈಕಿ 35 ಮಂದಿಯಲ್ಲಿ ಕೋವಿಡ್ ದೃಢಪಟ್ಟಿತ್ತು. ಈ ಪೈಕಿ ಸದ್ಯ ಐವರು ಓಮೈಕ್ರಾನ್ ಸೋಂಕಿತರಾಗಿದ್ದು, ಮೂವರ ಮೇಲೆ ನಿಗಾ ಇರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.