ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಆತಿಶಿ, ಇಂದು (ಭಾನುವಾರ) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಆತಿಶಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ರಾಜಭವನಕ್ಕೆ ತೆರಳಿ ಲೆಫ್ಟಿನಂಟ್ ಗವರ್ನರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಸಿಎಂ ಕಾರ್ಯಾಲಯ ತಿಳಿಸಿದೆ.

ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರಿಗೆ ಆತಿಶಿ ರಾಜೀನಾಮೆ ಪತ್ರ ಹಸ್ತಾಂತರಿಸಿದ್ದಾರೆ.

ಇದರೊಂದಿಗೆ ರಾಷ್ಟ್ರ ರಾಜಧಾನಿಯಲ್ಲಿ ಎಎಪಿ ಆಡಳಿತ ಕೊನೆಗೊಂಡಿದ್ದು, ಇದೇ ಮೊದಲ ಬಾರಿಗೆ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳಲಿದೆ. 2015 ಹಾಗೂ 20220ರಲ್ಲಿ ಎಎಪಿ ಭರ್ಜರಿ ಗೆಲುವು ಸಾಧಿಸಿತ್ತು.

ಈ ಬಾರಿ ದೆಹಲಿಯಲ್ಲಿ ಆಡಳಿತ ವಿರೋಧಿ ಅಲೆಗೆ ಸಿಲುಕಿದ ಎಎಪಿ ಅಧಿಕಾರ ಕಳೆದುಕೊಂಡಿದೆ. ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಬಿಜೆಪಿ 48 ಸ್ಥಾನ ಗೆದ್ದುಕೊಂಡಿದೆ. ಅಧಿಕಾರ ಕಳೆದುಕೊಂಡಿರುವ ಎಎಪಿ 22 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಕಾಂಗ್ರೆಸ್ ಸತತ ಮೂರನೇ ಸಲವೂ ಖಾತೆ ತೆರೆಯುವಲ್ಲಿ ವಿಫಲವಾಗಿದೆ.

ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಸೇರಿದಂತೆ ಎಎಪಿಯ ಘಟಾನುಘಟಿ ನಾಯಕರಿಗೆ ಹೀನಾಯ ಸೋಲು ಎದುರಾಗಿದೆ.

ಬಿಜೆಪಿಯಿಂದ ಯಾರು ಸಿಎಂ ಆಗಲಿದ್ದಾರೆ ಎಂಬುದು ಕುತೂಹಲವೆನಿಸಿದೆ. ಕೇಂದ್ರದಲ್ಲೂ ಅಧಿಕಾರದಲ್ಲಿರುವ ಬಿಜೆಪಿ ದೆಹಲಿಯಲ್ಲಿ 'ಡಬಲ್ ಎಂಜಿನ್' ಆಡಳಿತಕ್ಕೆ ಸಜ್ಜಾಗಿದೆ.
.Delhi Election Results | ಬಿಜೆಪಿಗೆ ವರದಾನ, ಎಎಪಿಗೆ ಮುಳುವಾಗಿದ್ದೇನು?.Delhi Result ಬಿಜೆಪಿ ಮತ ಪ್ರಮಾಣ ಜಿಗಿತ; ಎಎಪಿ ಇಳಿಕೆ, ಕಾಂಗ್ರೆಸ್ಗೂ ಅಲ್ಪ ಲಾಭ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.