ದೆಹಲಿ ಗಲಭೆಗೆ ಸಂಬಂಧಿಸಿದಂತೆ ಕಳೆದ ವರ್ಷ ಮೇ ತಿಂಗಳಿನಲ್ಲಿ ಈ ಮೂವರನ್ನು ಬಂಧಿಸಲಾಗಿತ್ತು. ಎರಡು ದಿನಗಳ ಹಿಂದೆ ಇವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ, ಮೂವರು ವಿದ್ಯಾರ್ಥಿಗಳ ಜಾಮೀನು ಮತ್ತು ಮುಚ್ಚಳಿಕೆಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಿಗದಿತ ಸಮಯದಲ್ಲಿ ಪೂರ್ಣಗೊಳ್ಳದ ಕಾರಣ ಅವರನ್ನು ಬಿಡುಗಡೆ ಮಾಡಿರಲಿಲ್ಲ.