ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ದರೋಡೆ: ಲೆಫ್ಟಿನೆಂಟ್‌ ಗವರ್ನರ್‌, ಕೇಂದ್ರದ ವಿರುದ್ಧ ಕೇಜ್ರಿವಾಲ್‌ ವಾಗ್ದಾಳಿ

Published 26 ಜೂನ್ 2023, 10:31 IST
Last Updated 26 ಜೂನ್ 2023, 10:31 IST
ಅಕ್ಷರ ಗಾತ್ರ

ನವದೆಹಲಿ: ನಗರದ ಪ್ರಗತಿ ಮೈದಾನ್‌ ಸುರಂಗ ರಸ್ತೆಯಲ್ಲಿ ನಡೆದ ದರೋಡೆ ಹಿನ್ನೆಲೆ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸೋಮವಾರ ಲೆಫ್ಟಿನೆಂಟ್‌ ಗವರ್ನರ್ ವಿ.ಕೆ ಸಕ್ಸೇನಾ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಶನಿವಾರ, ಪ್ರಗತಿ ಮೈದಾನ್‌ ಸುರಂಗ ರಸ್ತೆಯಲ್ಲಿ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ಖದೀಮರು ಚಲಿಸುತ್ತಿದ್ದ ಕಾರನ್ನು ಗನ್‌ ತೋರಿಸಿ ಅಡ್ಡಗಟ್ಟಿದ್ದು, ಕಾರಿನಲ್ಲಿದ್ದ ಸುಮಾರು ₹2 ಲಕ್ಷ ಹಣವನ್ನು ದೋಚಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ಈ ದರೋಡೆಯ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, 'ಲೆಫ್ಟಿನಂಟ್‌ ಗವರ್ನರ್‌ ಅವರು ಕೂಡಲೇ ರಾಜೀನಾಮೆ ನೀಡಬೇಕು. ದೆಹಲಿಯ ಜನರಿಗೆ ಸುರಕ್ಷತೆ ಮತ್ತು ಭದ್ರತೆಯನ್ನು ಕಲ್ಪಿಸುವ ಬೇರೆಯವರಿಗೆ ಅವಕಾಶ ಮಾಡಿಕೊಡಿ. ದೆಹಲಿಯನ್ನು ಸುರಕ್ಷಿತವಾಗಿಡಲು ಕೇಂದ್ರ ಸರ್ಕಾರಕ್ಕೆ ಆಗದಿದ್ದರೆ, ನಮಗೆ ಅವಕಾಶ ನೀಡಿ. ನಗರವನ್ನು ಮತ್ತು ನಾಗರಿಕರನ್ನು ಹೇಗೆ ಸುರಕ್ಷಿತವಾಗಿ ಇರಿಸಬೇಕು ಎಂಬುದನ್ನು ನಾವು ನಿಮಗೆ ತೋರಿಸುತ್ತೇವೆ' ಎಂದು ತಿಳಿಸಿದ್ದಾರೆ.

ದೆಹಲಿಯ ಕಾನೂನು ಮತ್ತು ಸುವ್ಯವಸ್ಥೆಯ ಅಧಿಕಾರವನ್ನು ಸ್ಥಳೀಯ ಸರ್ಕಾರಕ್ಕೆ ಹಸ್ತಾಂತರಿಸಬೇಕು ಎಂಬ ತಮ್ಮ ಬೇಡಿಕೆಯನ್ನು ಕೇಜ್ರಿವಾಲ್‌ ಪುನರುಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT