ನವದೆಹಲಿ (ಪಿಟಿಐ): ದಕ್ಷಿಣ ದೆಹಲಿಯ ಸಾಕೇತ್ ಮೆಟ್ರೊ ನಿಲ್ದಾಣದ ಸಮೀಪ ಮೂರು ಅಂತಸ್ತಿನ ಕಟ್ಟಡವೊಂದು ಶನಿವಾರ ಕುಸಿದು ಬಿದ್ದಿದ್ದು, ಅವಶೇಷಗಳಡಿ ಅನೇಕರು ಸಿಲುಕಿದ್ದಾರೆ. ಈ ಪೈಕಿ ಮಧ್ಯರಾತ್ರಿ ವೇಳೆಗೆ ಒಂಬತ್ತು ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾತ್ರಿ 7.45ರ ಸುಮಾರಿಗೆ ಈ ಅವಘಡ ನಡೆದಿದೆ. ಕಟ್ಟಡದ ನೆಲಮಹಡಿಯಲ್ಲಿ ಕೋಚಿಂಗ್ ಕೇಂದ್ರ ಇತ್ತು. ಮೇಲಿನ ಮೂರು ಅಂತಸ್ತುಗಳಲ್ಲಿ ಕೆಫೆಗಳು, ಕಚೇರಿಗಳು ಇದ್ದವು. ಮೂರನೇ ಮಹಡಿಯಲ್ಲಿ ನಿರ್ಮಾಣ ಕಾಮಗಾರಿಯೂ ನಡೆಯುತ್ತಿತ್ತು. ಹೀಗಾಗಿ ಅವಶೇಷಗಳಡಿ ಸಿಲುಕಿರುವವರಲ್ಲಿ ವಿದ್ಯಾರ್ಥಿಗಳೇ ಹೆಚ್ಚು ಇರಬಹುದು ಎಂದು ಶಂಕಿಸಲಾಗಿದೆ ಎಂದು ಹೇಳಿದ್ದಾರೆ.

‘ಮೂರು ಅಂತಸ್ತಿನ ಕಟ್ಟಡವು ಸಂಪೂರ್ಣವಾಗಿ ಕುಸಿದಿದ್ದು, ಕ್ಯಾಂಟೀನ್ ನಲ್ಲಿದ್ದ ಕೆಲವರೂ ಸಿಲುಕಿದ್ದಾರೆ’ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

‘ಘಟನಾ ಸ್ಥಳದಿಂದ ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ಮಂದಿಯನ್ನು ರಕ್ಷಿಸಲಾಗಿದೆ. ಅವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಸ್ಥಳೀಯ ನಿವಾಸಿಯೊಬ್ಬರು ಮಾಹಿತಿ ನೀಡಿದ್ದಾರೆ.

‘ಸಾಮಾನ್ಯವಾಗಿ ಈ ಕಟ್ಟಡದಲ್ಲಿ 300–400 ಜನರು ಇರುತ್ತಿದ್ದರು. ಕನಿಷ್ಠ 100ರಿಂದ 150 ಜನರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ’ ಎಂದೂ ಅವರು ಹೇಳಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ, ಎನ್ಡಿಆರ್ಎಫ್ ಮತ್ತು ಪೊಲೀಸ್ ತಂಡಗಳು ಸ್ಥಳದಲ್ಲಿದ್ದು, ಜೆಸಿಬಿ ಸೇರಿದಂತೆ ಭಾರಿ ಯಂತ್ರಗಳ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

‘ನನ್ನ ಮಗಳು ನೀಲಂ ಇತ್ತೀಚೆಗೆ ವಿದೇಶದಲ್ಲಿ ಎಂಬಿಬಿಎಸ್ ಓದಿ, ಸ್ನಾತಕೋತ್ತರ ಪದವಿಯ ಪ್ರವೇಶ ಪರೀಕ್ಷೆಗಾಗಿ ಸಿದ್ಧತೆ ನಡೆಸುತ್ತಿದ್ದಳು. ಘಟನೆ ವೇಳೆ ಕ್ಯಾಂಟೀನ್ನಲ್ಲಿ 30ರಿಂದ 35 ಮಂದಿ ವಿದ್ಯಾರ್ಥಿಗಳು ಇದ್ದರು’ ಎಂದು ಗಾಯಾಳು ವಿದ್ಯಾರ್ಥಿನಿಯ ತಂದೆ ಬಲವಂತ್ ಯಾದವ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-4-1828440974

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.