ನವದೆಹಲಿ: ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಯಮುನಾ ನದಿ ಅಪಾಯಮಟ್ಟದಲ್ಲಿ ಹರಿಯುತ್ತಿರುವುದರಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ಕಳೆದೊಂದು ವಾರದಿಂದ ಯಮುನಾ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹಳೇ ದೆಹಲಿ ಸೇರಿದಂತೆ ನದಿ ಪಾತ್ರದ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿಎದುರಾಗಿದೆ. ಮುಂಜಾಗ್ರತ ಕ್ರಮವಾಗಿ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ.
ಪ್ರವಾಹದ ಭೀತಿ ಎದುರಾಗಿರುವುದುರಿಂದ ನದಿಯಿಂದ ಸಾಕಷ್ಟು ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಬುಧವಾರ ಬೆಳಗ್ಗೆ 28,253 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದೆ.
28253 cusecs of water was released into Yamuna river from Haryana's Hathani barrage at 6 am today; Visuals from Old Delhi railway bridge (Loha Pul) pic.twitter.com/LS0o1jscOp
ದೆಹಲಿ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ವಿಪತ್ತು ನಿರ್ವಹಣಾ ತಂಡಗಳು, ಅಗ್ನಿಶಾಮಕ ಸಿಬ್ಬಂದಿಗಳನ್ನು ನದಿ ಪಾತ್ರ ಪ್ರದೇಶಗಳಲ್ಲಿ ನಿಯೋಕನೆ ಮಾಡಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ.