ನವದೆಹಲಿ: ಉತ್ತರ ದೆಹಲಿಯ ಸಬ್ಜಿ ಮಂಡಿ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದು ಅಣ್ಣ– ತಮ್ಮ ಮೃತಪಟ್ಟಿದ್ದಾರೆ.

ದುರಂತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ 7 ಮತ್ತು 12 ವರ್ಷದ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ. ಈ ಮಕ್ಕಳು ತಾಯಿಯ ಜೊತೆಗೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಕಟ್ಟಡ ಕುಸಿದು, ಅವಶೇಷಗಳಡಿ ಸಿಲುಕಿಕೊಂಡಿದ್ದರು.

ಅವಶೇಷಗಳಡಿ ಸಿಲುಕಿದ್ದ 72 ವರ್ಷದ ವೃದ್ಧರೊಬ್ಬರನ್ನು ರಕ್ಷಿಸಲಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ. ಅವರ ತಲೆಗೆ ಪೆಟ್ಟು ಬಿದ್ದಿದೆ. ಇನ್ನು ಮೂರರಿಂದ ನಾಲ್ಕು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಟ್ಟಡದ ಬಳಿಯೇ ನಿಲ್ಲಿಸಿದ್ದ ಹಲವು ಕಾರುಗಳು ಹಾನಿಗೊಂಡಿವೆ. ಎಂಸಿಡಿ ಮತ್ತು ಎನ್‌ಆರ್‌ಡಿಎಫ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.