ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಿಂದ ವಾರಾಣಸಿಗೆ ಹೊರಟಿದ್ದ ಇಂಡಿಗೊ ವಿಮಾನಕ್ಕೆ ಹುಸಿ ಬಾಂಬ್‌ ಬೆದರಿಕೆ

Published 28 ಮೇ 2024, 2:16 IST
Last Updated 28 ಮೇ 2024, 5:16 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾರಾಣಸಿಗೆ ಹೊರಡಬೇಕಿದ್ದ ಇಂಡಿಗೊ ವಿಮಾನದಲ್ಲಿ ಬಾಂಬ್‌ ಇರಿಸಲಾಗಿದೆ ಎನ್ನುವುದು ಹುಸಿ ಬೆದರಿಕೆ ಎಂದು ಪೊಲೀಸರು ತಿಳಿಸಿದ್ದಾರೆ. 

‘ಈ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ನಡೆಸಲಾಗಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ, ಇದೊಂದು ಹುಸಿ ಬೆದರಿಕೆ, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ’ ಎಂದು ಅಧಿಕಾರಿ ತಿಳಿಸಿದ್ದಾರೆ.

ದೆಹಲಿಯಿಂದ ವಾರಾಣಸಿಗೆ ಇಂದು ಬೆಳಿಗ್ಗೆ 5.35ಕ್ಕೆ ಹೊರಡಬೇಕಿದ್ದ ಇಂಡಿಗೊ 6E2211 ವಿಮಾನದಲ್ಲಿ ಬಾಂಬ್‌ ಇಡಲಾಗಿದ್ದು 30 ನಿಮಿಷಗಳಲ್ಲಿ ಸ್ಫೋಟಗೊಳ್ಳಲಿದೆ ಎನ್ನುವ ಚೀಟಿಯೊಂದು ಪೈಲಟ್‌ ಒಬ್ಬರಿಗೆ ಶೌಚಾಲಯದಲ್ಲಿ ಸಿಕ್ಕಿತ್ತು.

ತಕ್ಷಣವೇ ನಿಯಂತ್ರಣಾ ಕೊಠಡಿಗೆ ಮಾಹಿತಿ ರವಾನಿಸಿ. ವಿಮಾನ ಹಾರಾಟವನ್ನು ರದ್ದುಗೊಳಿಸಿ ಎಲ್ಲಾ ಪ್ರಯಾಣಿಕರನ್ನು ತುರ್ತು ಬಾಗಿಲಿನ ಮೂಲಕ ಹೊರಕ್ಕೆ ಕರೆತರಲಾಗಿತ್ತು.

ವಿಮಾನದಲ್ಲಿ 176 ಮಂದಿ ಪ್ರಯಾಣಿಕರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT