ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆ ತೀವ್ರ ಹಿಂಸಾರೂಪ ತಾಳಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉನ್ನತ ನಾಯಕರ ಸಭೆ ಕರೆದಿದ್ದಾರೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಇತರ ರಾಜಕೀಯ ಪಕ್ಷಗಳ ನಾಯಕರನ್ನು ಸಭೆಗೆ ಆಹ್ವಾನಿಸಲಾಗಿದೆ.

ಇದನ್ನೂ ಓದಿ:ದೆಹಲಿ ಹಿಂಸಾಚಾರ: ಮಂದಿರ, ಮಸೀದಿ ಮೈಕ್ಗಳಿಂದ ಶಾಂತಿ ಸಂದೇಶ ಬಿತ್ತರಕ್ಕೆ ಆದೇಶ

ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿ ಅಮಿತ್ ಶಾ ಸೋಮವಾರ ತಡರಾತ್ರಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಪರಿಸ್ಥಿತಿ ಅವಲೋಕಿಸಿದ್ದರು. ಇದಾದ ಬಳಿಕ ಇಂದು ಸಭೆ ಕರೆದಿದ್ದಾರೆ. ಅರವಿಂದ ಕೇಜ್ರಿವಾಲ್ ಸಹ ಶಾಸಕರು ಮತ್ತು ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ.

ಸೋಮವಾರ ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಓರ್ವ ಪೊಲೀಸ್ ಹೆಡ್‌ಕಾನ್ಸ್‌ಟೆಬಲ್ ಸೇರಿ ನಾಲ್ವರು ಮೃತಪಟ್ಟಿದ್ದರು. ಈ ಮಧ್ಯೆ, ಮೃತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ದೆಹಲಿ ಹಿಂಸಾಚಾರ: ಸಾವಿನ ಸಂಖ್ಯೆ 7ಕ್ಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.